ಬೆಂಗಳೂರು : ದಿನಾಂಕ 07-09-2020ರಿಂದ ದಿನಾಂಕ 19-09-2020ರವರೆಗೆ ರಾಜ್ಯದ 305 ಪರೀಕ್ಷಾ ಕೇಂದ್ರಗಳಲ್ಲಿ ನಡೆದಂತ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಮಂಡಳಿ ಪ್ರಕಟಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, 2020ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು www.karresults.nic.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಪೂರಕ ಪರೀಕ್ಷೆಯಲ್ಲಿ ಒಟ್ಟು 2,12,678 ವಿದ್ಯಾರ್ಥಿಗಳು ಹಾಜರಾಗಿದ್ದರು. ಇಂತಹ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ 87,784 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ.41.28ರಷ್ಟು ಫಲಿತಾಂಶ ಬಂದಿರುವುದಾಗಿ ತಿಳಿಸಿದೆ.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ವೀಕ್ಷಿಸಲು www.karresults.nic.in ಜಾಲತಾಣಕ್ಕೆ ವಿದ್ಯಾರ್ಥಿಗಳು ಭೇಟಿ ನೀಡಬೇಕು. ಇಲ್ಲಿ ನಿಮ್ಮ ನೊಂದಣಿ ಸಂಖ್ಯೆಯನ್ನು ನಮೂದಿಸಿ, ಫಲಿತಾಂಶದ ವಿವರವನ್ನು ಪಡೆಯಬಹುದು. ಅಲ್ಲದೇ ತಮ್ಮ ಕಾಲೇಜಿನಲ್ಲಿಯೂ ಫಲಿತಾಂಶ ಪ್ರಕಟಗೊಂಡಿದ್ದು, ಅಲ್ಲಿಯೂ ವೀಕ್ಷಿಸಬಹುದಾಗಿದೆ.