ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿಗಳು ಉಗ್ರರ ನಡುವೆ ಗುಂಡಿನ ಚಕಮಕಿ : ಇಬ್ಬರು ಉಗ್ರರು ಉಡೀಸ್-ಕಹಳೆ ನ್ಯೂಸ್
ಜಮ್ಮು-ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.’ಕುಲ್ಗಾಮ್ ಎನ್ ಕೌಂಟರ್ ನಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆ ಮಾಡಲಾಗಿದೆ.
ಇನ್ನೂ ಉಗ್ರರ ಕಾರ್ಯಾಚರಣೆ ಪ್ರಗತಿಯಲ್ಲಿದೆ’ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟರ್ ನಲ್ಲಿ ಮಾಹಿತಿ ನೀಡಿದ್ದಾರೆ.ಈ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಶುಕ್ರವಾರ ರಾತ್ರಿ ಕಾರ್ಯಾಚರಣೆ ನಡೆಸಿ ಶೋಧ ಕಾರ್ಯಾಚರಣೆಯನ್ನು ನಡೆಸಿತ್ತು. ಇದೀಗ ಕಾರ್ಯಾಚರಣೆ ಮುಗಿದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದು, ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ನಂತರ ಎನ್ ಕೌಂಟರ್ ಆಗಿ ಮಾರ್ಪಟ್ಟಿದ್ದು, ಭದ್ರತಾ ಯೋಧರ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.ಅಕ್ಟೋಬರ್ 7ರಂದು ಶೋಪಿಯಾನ್ ಜಿಲ್ಲೆಯ ಸುಗನ್ ಝೈನಾಪೋರಾ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಭದ್ರತಾ ಪಡೆಗಳು ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದವು. ಇದೇ ರೀತಿಯ ಘಟನೆ ಸೆಪ್ಟೆಂಬರ್ 27ರಂದು ಅವಂತಿ ಪರೋರಾ ಜಿಲ್ಲೆಯ ಸಂಬೂರಾ ಪ್ರದೇಶದಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿತ್ತು.