Recent Posts

Sunday, January 19, 2025
ಹೆಚ್ಚಿನ ಸುದ್ದಿ

ಗರಿಷ್ಠ ಅಂಕ ನೀಡಿ ಪಾಸ್ ಮಾಡಲು ಆದೇಶ: ಫೇಲಾದವರಿಗೂ ಗುಡ್ ನ್ಯೂಸ್-ಕಹಳೆ ನ್ಯೂಸ್

ಬೆಂಗಳೂರು : ಪ್ರಥಮ ಪಿಯುಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪದವಿ ಪೂರ್ವಶಿಕ್ಷಣ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣವಾದ ವಿದ್ಯಾರ್ಥಿಗಳಿಗೆ ಪಾಸ್ ಮಾಡುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅನುತ್ತೀರ್ಣ ವಿದ್ಯಾರ್ಥಿಗಳು ಅ.20ರೊಳಗೆ ಕಾಲೇಜು ಹಂತದಲ್ಲೇ ಪೂರಕ ಪರೀಕ್ಷೆ ನಡೆಸಬೇಕು. ಪರೀಕ್ಷೆಯಲ್ಲಿ ಉತ್ತೀರ್ಣಕ್ಕೆ ಬೇಕಾದ ಗರಿಷ್ಠ ಅಂಕ ನೀಡಿ ಮುಂದಿನ ಶಿಕ್ಷಣಕ್ಕೆ ಅವಕಾಶ ಕಲ್ಪಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂಬಂಧ ಇಲಾಖೆಯ ಎಲ್ಲಾ ಉಪ ನಿರ್ದೇಶಕರು ಕಾಲೇಜುಗಳ ಪ್ರಾಂಶುಪಾಲರಿಗೆ ಸುತ್ತೋಲೆ ನೀಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು 2020 ಫೆಬ್ರವರಿಯಲ್ಲಿ ನಡೆದ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗೆ ಗೈರು ಹಾಜರಾದ ಹಾಗೂ ಜುಲೈ 13ಕ್ಕೂ ಮುನ್ನ ಸುತ್ತೋಲೆಯಂತೆ ಪೂರಕ ಪರೀಕ್ಷೆಗೆ ಶುಲ್ಕ ಪಾವತಿಸಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಅ,20 ರೊಳಗೆ ಕಾಲೇಜು ಹಂತದಲ್ಲೇ ಪೂರಕ ಪರೀಕ್ಷೆ ನಡೆಸಿ ಫಲಿತಾಂಶದಲ್ಲಿ ಅವರು ಗಳಿಸಿದ ಅಂಕ ಪರಿಗಣಿಸಬೇಕು. ಅನುತ್ತೀರ್ಣರಾದವರಿಗೆ ಅಗತ್ಯದಷ್ಟು ಅಂಕ ನೀಡಿ ಪಾಸ್ ಮಾಡಬೇಕು ಎಂದು ಸೂಚನೆ ನೀಡಿದೆ.