Recent Posts

Sunday, January 19, 2025
ಹೆಚ್ಚಿನ ಸುದ್ದಿ

ಖ್ಯಾತ ಸಂಗೀತ ನಿರ್ದೇಶಕ ರಾಜನ್ ಇನ್ನಿಲ್ಲ-ಕಹಳೆ ನ್ಯೂಸ್

ಬೆಂಗಳೂರಿನ ಆರ್.ಟಿ. ನಗರದ ನಿವಾಸದಲ್ಲಿ ಖ್ಯಾತ ಸಂಗೀತ ನಿರ್ದೇಶಕ ರಾಜನ್(87) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಸೇರಿ ಹಲವು ಭಾಷೆಗಳಿಗೆ ಅವರು ಸಂಗೀತ ನಿರ್ದೇಶನ ನೀಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

‘ಗಂಧದ ಗುಡಿ’, ‘ಪರಸಂಗದ ಗೆಂಡೆತಿಮ್ಮ’, ‘ಬಯಲುದಾರಿ’, ‘ನಾ ನಿನ್ನ ಮರೆಯಲಾರೆ’, ‘ಹೊಂಬಿಸಿಲು’, ‘ಗಾಳಿಮಾತು’, ‘ಶ್ರೀನಿವಾಸ ಕಲ್ಯಾಣ’, ‘ಚಲಿಸುವ ಮೋಡಗಳು’ ಸೇರಿದಂತೆ ಹಲವು ಚಿತ್ರಗಳಿಗೆ ಸಂಗೀತ ನಿರ್ದೇಶಿಸಿದ್ದರು.

375 ಹೆಚ್ಚು ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿದ್ದರು ರಾಜನ್-ನಾಗೇಂದ್ರ ಎಂದೇ ಖ್ಯಾತವಾಗಿದ್ದ ಸಹೋದರರು ನಾಗೇಂದ್ರ ಸಂಗೀತ ನಿರ್ದೇಶಕ ರಾಜನ್ ಅವರ ಸಹೋದರರಾಗಿದ್ದಾರೆ. 1950 ರಿಂದ 1990 ರವರೆಗೆ ಈ ಸಹೋದರರು ಮೋಡಿ ಮಾಡಿದ್ದರು.

ಪುತ್ರ, ಪುತ್ರಿಯನ್ನು ಸಂಗೀತ ನಿರ್ದೇಶಕ ರಾಜನ್ ಆಗಲಿದ್ದಾರೆ. ಹೆಬ್ಬಾಳದ ಸ್ಮಶಾನದಲ್ಲಿ ಇವತ್ತು ಅಂತ್ಯಸಂಸ್ಕಾರ ನಡೆಯಲಿದೆ. ಪುತ್ರ ಅನಂತ್ ಅಂತ್ಯಕ್ರಿಯೆ ನೆರವೇರಿಸಲಿದ್ದಾರೆ ಎಂದು ಹೇಳಲಾಗಿದೆ.