Recent Posts

Sunday, January 19, 2025
ಹೆಚ್ಚಿನ ಸುದ್ದಿ

ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ಖುಷ್ಬೂ ರಾಜೀನಾಮೆ! ಬಿಜೆಪಿ ಸೇರ್ಪಡೆ ಬಹುತೇಕ ಖಚಿತ-ಕಹಳೆ ನ್ಯೂಸ್

ಚೆನ್ನೈ: ಚಿತ್ರರಂಗದಿಂದ ರಾಜಕೀಯಕ್ಕೆ ಆಗಮಿಸಿದ್ದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರೆ ಖುಷ್ಬೂ ಸುಂದರ್ ಇಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆದರೆ ಈ ಬಗ್ಗೆ ಪ್ರತಿಕ್ರಿಯಿಸಲು ಖುಷ್ಬೂ ಲಭ್ಯರಿರಲಿಲ್ಲ. ಸಂಜೆ ವಿಮಾನ ನಿಲ್ದಾಣದಲ್ಲಿ ಈ ಕುರಿತ ಪ್ರಶ್ನೆಗೆ ಉತ್ತರಿಸಲು ಖುಷ್ಬೂ ನಿರಾಕರಿಸಿದ್ದರು. ಇವರ ಜತೆಗೆ ತಮಿಳುನಾಡಿನ ಐಆರ್‌ಎಸ್ ಅಧಿಕಾರಿಯೊಬ್ಬರು ಮತ್ತು ಯೂಟ್ಯೂಬರ್ ಒಬ್ಬರು ಕೂಡಾ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎನ್.ಮುರುಗನ್ ಶನಿವಾರದಿಂದ ದೆಹಲಿಯಲ್ಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ಒಂದು ತಿಂಗಳಿಂದ ಖುಷ್ಬೂ ಬಿಜೆಪಿ ಸೇರುತ್ತಾರೆ ಎಂಬ ವದಂತಿ ದಟ್ಟವಾಗಿ ಹಬ್ಬಿತ್ತು. ಬಿಜೆಪಿ ಬಗೆಗಿನ ತಮ್ಮ ಮನೋಭಾವ ಬದಲಾಗಿದೆ ಎಂದು ಖುಷ್ಬೂ ಈ ಹಿಂದೆ ಟ್ವೀಟ್ ಮಾಡಿದ್ದರು. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸ್ವಾಗತಿಸುವ ಮೂಲಕ ಅಚ್ಚರಿ ಮೂಡಿಸಿದ್ದರು. ಜತೆಗೆ ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕಾಗಿ ಪಕ್ಷದ ಮುಖಂಡ ರಾಹುಲ್‌ಗಾಂಧಿ ಅವರ ಕ್ಷಮೆ ಯಾಚಿಸಿದ್ದರು.