Recent Posts

Sunday, January 19, 2025
ಹೆಚ್ಚಿನ ಸುದ್ದಿ

ಕೋವಿಡ್ ನಿಂದಾಗಿ ನೀಟ್ ಪರೀಕ್ಷೆಗೆ ಗೈರಾಗಿದ್ದ ವಿದ್ಯಾರ್ಥಿಗಳಿಗೆ ಅ. 14ರಂದು ಪರೀಕ್ಷೆ ನಡೆಸಲು ‘ಸುಪ್ರೀಂ’ ಅನುಮತಿ!-ಕಹಳೆ ನ್ಯೂಸ್

ನವದೆಹಲಿ : ಕೊರೋನಾ ಸೋಂಕಿನಿಂದ ಸೆಪ್ಟೆಂಬರ್ ನಲ್ಲಿ NEET ಪರೀಕ್ಷೆಗೆ ಹಾಜರಾಗದೇ ಪರೀಕ್ಷೆಗೆ ತಪ್ಪಿಸಿಕೊಂಡಿದ್ದ ವಿದ್ಯಾರ್ಥಿಗಳಿಗೆ ಸುಪ್ರೀಂ ಕೋರ್ಟ್ ಗುಡ್ ನ್ಯೂಸ್ ನೀಡಿದೆ. ಕೊರೋನಾದಿಂದ ಸಿಇಟಿ ಪರೀಕ್ಷೆಗೆ ಹಾಜರಾಗದ ಅಥವಾ ಕಂಟೈನ್ಮೆಂಟ್ ವಲಯದಲ್ಲಿ ವಾಸಮಾಡುತ್ತಿರುವ ಕಾರಣ ಸೆಪ್ಟೆಂಬರ್ ನಲ್ಲಿ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ನಡೆಸಲು ಅಕ್ಟೋಬರ್ 14ರಂದು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.


ಇಂದು ಈ ಕುರಿತಂತೆ ವಿದ್ಯಾರ್ಥಿಗಳು ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿಂದ ಸುಪ್ರೀಂ ಕೋರ್ಟ್ ನ್ಯಾಯಪೀಠ, ಕೊರೋನಾದಿಂದ ಸಿಇಟಿ ಪರೀಕ್ಷೆ ತಪ್ಪಿಸಿಕೊಂಡಿದ್ದಂತ ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ನಡೆಸಿ, ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡುವಂತೆ ಸೂಚಿಸಿದೆ. ಅಲ್ಲದೇ ಅಕ್ಟೋಬರ್ 14ರಂದು ನೀಟ್ ಪರೀಕ್ಷೆ ನಡೆಸಿ, ಅಕ್ಟೋಬರ್ 16ರಂದು ಫಲಿತಾಶ ಕೂಡ ಪ್ರಕಟಿಸುವಂತೆ ಸೂಚಿಸಿದೆ. ಹೀಗಾಗಿ ಕೋವಿಡ್ ಸೋಂಕಿತ ವಿದ್ಯಾರ್ಥಿಗಳಿಗೆ ಅಕ್ಟೋಬರ್ 14ರಂದು ಸಿಇಟಿ ಪರೀಕ್ಷೆ ಬರೆಯಲು ಅವಕಾಶ ಸಿಗಲಿದೆ. ಸೆಪ್ಟೆಂಬರ್ 13ರಂದು ನೀಟ್ 2020 ನಡೆದಿದ್ದು, ದೇಶಾದ್ಯಂತ 3,843 ಕೇಂದ್ರಗಳಲ್ಲಿ 14 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು