Monday, March 31, 2025
ಸುದ್ದಿಸುಳ್ಯ

ಸುಳ್ಯ:ಕಲಾವಿದ ಮೋಹನ ಸೋನ ಅಲ್ಪ ಕಾಲದ ಅಸೌಖ್ಯದಿಂದ ನಿಧನ-ಕಹಳೆ ನ್ಯೂಸ್

ಹೆಸರಾಂತ ಕಲಾವಿದ ಮೋಹನ ಸೋನ ಅಲ್ಪ ಕಾಲದ ಅಸೌಖ್ಯದಿಂದ ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಮೋಹನ್ ಸೋನ ಕೆಲ ಸಮಯದಿಂದ ಅನಾರೋಗ್ಯಕ್ಕೊಳಗಾಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಟ್ಲದ ಸಿ.ಪಿ.ಸಿ.ಆರ್.ಐ ನಲ್ಲಿ ಉದ್ಯೋಗಿಯಾಗಿ ನಿವೃತ್ತರಾಗಿದ್ದ ಮೋಹನ್ ಸೋನಾ ಈ ಭಾಗದ ಪ್ರಸಿದ್ಧ ಕಲಾವಿದರಾಗಿದ್ದರು. ಚಿತ್ರ ಕಲಾವಿದರಾಗಿ, ನಾಟಕ ನಟರಾಗಿ, ನಿರ್ದೇಶಕರಾಗಿ ತನ್ನ ಪ್ರತಿಭೆ ಮೆರೆದವರು. ಚೋಮ, ನಾಳೆ ಯಾರಿಗೂ ಇಲ್ಲ, ತೆರೆಗಳಲ್ಲಿ ಅದ್ಭುತ ಅಭಿನಯ ತೋರಿದ್ದರು. ಅನೇಕ ಕಡೆ ಚಿತ್ರಕಲಾ ಪ್ರದರ್ಶನಗಳನ್ನು ಮಾಡಿದ್ದರು. ಸೋಣಂಗೇರಿಯಲ್ಲಿ ಬಯಲು ಚಿತ್ರಾಲಯ ಮಾಡಿ ಇಡೀ ರಾಜ್ಯದ ಗಮನ ಸೆಳೆದಿದ್ದರು.

ಮೋಹನ್ ಸೋನ ಪತ್ನಿ, ಇಬ್ಬರು ಮಕ್ಕಳು, ಸಹೋದರ, ಸಹೋದರಿಯರನ್ನು ಅಗಲಿದ್ದಾರೆ

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ