ಮಂಗಳೂರು, ಅ.13: ಹಾಲಿನ ವಾಹನವೊಂದರಲ್ಲಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಬಂದರ್ ಠಾಣಾ ಪೊಲೀಸರು ಮಂಗಳವಾರ ಮುಂಜಾನೆ ವಶಕ್ಕೆ ಪಡೆದಿದ್ದಾರೆ.
ಪಂಪ್ ವೆಲ್ ಕಡೆಯಿಂದ ಬರುತ್ತಿದ್ದ ವಾಹನವನ್ನು ಸಂಘ ಪರಿವಾರದ ಕಾರ್ಯಕರ್ತರು ತಡೆದು ನಿಲ್ಲಿಸಲು ಮುಂದಾಗಿದ್ದಾರೆ. ಈ ವೇಳೆ ವಾಹನ ನಿಲುಗಡೆಯಾಗಿಲ್ಲ ಎಂದು ತಿಳಿದುಬಂದಿದೆ. ಬಳಿಕ ವಾಹನವನ್ನು ಹಿಂಬಾಲಿಸಿಕೊಂಡು ಬಂದಿದ್ದ ಸಂಘ ಪರಿವಾರದ ಕಾರ್ಯಕರ್ತರು ವೆನ್ಲಾಕ್ ಆಸ್ಪತ್ರೆ ಬಳಿ ವಾಹನವನ್ನು ಅಡ್ಡಗಟ್ಟಿದ್ದಾರೆ.
ಈ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು ವಾಹನದಲ್ಲಿದ್ದ ಓರ್ವ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಇನ್ನಿಬ್ಬರು ತಪ್ಪಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಹಾಲಿನ ಟ್ರೇಗಳ ಎಡೆಯಲ್ಲಿ ದನದ ಮಾಂಸವನ್ನು ತುಂಬಿಸಿಕೊಂಡು ಬರಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.
ಬಂದರ್ ಪೊಲೀಸರು ವಾಹನವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.