Recent Posts

Sunday, January 19, 2025
ರಾಜ್ಯಸುದ್ದಿ

ಡ್ರಗ್ಸ್ ಕೇಸ್ :ಮತ್ತೊಬ್ಬ ಆರೋಪಿ ಅರೆಸ್ಟ್-ಕಹಳೆ ನ್ಯೂಸ್

ಬೆಂಗಳೂರು, ಅ.13- ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಚಿಕ್ಕಮಗಳೂರಿನಲ್ಲಿ ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಶ್ವಿನ್ ಭೋಗಿ ಬಂಧಿತ ಆರೋಪಿ. ಮಾದಕ ವಸ್ತು ಜಾಲಕ್ಕೆ ಸಂಬಂಧಿಸಿದಂತೆ ಕಾಟನ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಈತ 9ನೇ ಆರೋಪಿ.ಕಾಟನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾದ ನಂತರ ಅಶ್ವಿನ್ ತಲೆಮರೆಸಿಕೊಂಡಿದ್ದ. ಈತನ ಬಂಧನಕ್ಕಾಗಿ ಸಿಸಿಬಿ ಪೊಲೀಸರು ವ್ಯಾಪಕ ಶೋಧ ನಡೆಸುತ್ತಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಚಿಕ್ಕಮಗಳೂರಿನಲ್ಲಿ ಅಶ್ವಿನ್ ಇರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರ ತಂಡ ಅಲ್ಲಿಗೆ ತೆರಳಿ ಆತನನ್ನು ಬಂಧಿಸಿ ಬೆಂಗಳೂರಿಗೆ ಕರೆತಂದು ವಿಚಾರಣೆ ಮಾಡುತ್ತಿದ್ದಾರೆ.ಕಾಟನ್ ಪೇಟೆ ಪ್ರಕರಣಕ್ಕೆ ಸಂಬಂಸಿದ್ದಂತೆ ಶಿವ ಪ್ರಸಾದ್, ಆದಿತ್ಯ ಆಳ್ವ ಸೇರಿದಂತೆ ಇನ್ನೂ ಐದು ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರಿಗಾಗಿ ಸಿಸಿಬಿ ಪೊಲೀಸರು ವ್ಯಾಪಕ ಶೋಧ ನಡೆಸುತ್ತಿದ್ದಾರೆ.