Recent Posts

Monday, January 20, 2025
ದಕ್ಷಿಣ ಕನ್ನಡ

ದಕ್ಷಿಣಕನ್ನಡ ಡಿ.ಸಿ ಡಾ.ಕೆ.ವಿ.ರಾಜೇಂದ್ರ ಅವರಿಗೆ ಕೊರೊನಾ ದೃಢ-ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರಿಗೆ ಕೋವಿಡ್-19 ಸೋಂಕು ತಗಲಿರುವುದು ಮಂಗಳವಾರ ದೃಢಪಟ್ಟಿದೆ.


ಜಿಲ್ಲಾಧಿಕಾರಿಯಲ್ಲಿ ಯಾವುದೇ ರೋಗದ ಲಕ್ಷಣಗಳು ಕಂಡುಬಂದಿಲ್ಲ. ಸೋಂಕಿಗೆ ಪಾಸಿಟಿವ್ ಆಗಿರುವ ಹಿನ್ನೆಲೆಯಲ್ಲಿ ಅವರು ಮನೆಯಲ್ಲೇ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.ಈ ನಡುವೆ ಜಿಲ್ಲಾಧಿಕಾರಿಯವರ ಪತ್ನಿ ಹಾಗೂ ಮಗುವಿಗೂ ಕೊರೋನ ಸೋಂಕು ತಗಲಿರುವುದು ದೃಢಪಟ್ಟಿದ್ದು, ಅವರನ್ನೂ ಹೋಂ ಕ್ವಾರಂಟೈನ್ ಮಾಡಲಾಗಿದೆ.
ಕೋವಿಡ್ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಸ್ವಯಂ ಆಗಿ ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು