Recent Posts

Monday, January 20, 2025
ಹೆಚ್ಚಿನ ಸುದ್ದಿ

ಡ್ರಗ್ಸ್ ಪ್ರಕರಣ: ಬಾಲಿವುಡ್ ನಟ ವಿವೇಕ್ ಒಬೆರಾಯ್ ಮನೆ ಮೇಲೆ ಸಿಸಿಬಿ ದಾಳಿ!-ಕಹಳೆ ನ್ಯೂಸ್

ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಮನೆಯ ಮೇಲೆ ಬೆಂಗಳೂರು ಕೇಂದ್ರ ಅಪರಾಧ ಶಾಖೆ (ಸಿಸಿಬಿ) ದಾಳಿ ನಡೆಸಿದೆ. ವಿವೇಕ್ ಅವರ ಸಂಬಂಧಿಯಾಗಿರುವ ಆದಿತ್ಯ ಅಳ್ವಾ ಬೆಂಗಳೂರು ಡ್ರಗ್ಸ್ ಪ್ರಕರಣದ ಆರೋಪಿ. ಆತನನ್ನು ಹುಡುಕಿಕೊಂಡು ಪೊಲೀಸರು ವಿವೇಕ್ ಅವರ ಮುಂಬೈ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆದಿತ್ಯ ವಿರುದ್ಧ ಪ್ರಕರಣ ದಾಖಲಾದಾಗಿನಿಂದ ಆತ ತಲೆಮರೆಸಿಕೊಂಡಿದ್ದಾನೆ. ಇಂದು . ಸಿಸಿಬಿ ನ್ಯಾಯಾಲಯದ ವಾರಂಟ್‌ನೊಂದಿಗೆ ವಿವೇಕ್ ಅವರ ಮನೆಯಲ್ಲಿ ಹುಡುಕಾಟ ನಡೆಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಿಸಿಬಿ ಹೊರಡಿಸಿದ ಹೇಳಿಕೆಯ ಪ್ರಕಾರ, ಕಾಟನ್‌ಪೇಟೆ ಡ್ರಗ್ಸ್ ಪ್ರಕರಣದಲ್ಲಿ ಆದಿತ್ಯ ಆಳ್ವಾ ಬೇಕಾಗಿದ್ದು ಆತ ತಲೆಮರೆಸಿಕೊಂಡಿದ್ದಾನೆ. ವಿವೇಕ್ ಒಬೆರಾಯ್ ಅವರ ಸಂಬಂಧಿಯಾಗಿರುವ ಆಳ್ವಾಗೆ ನಟ ಆಶ್ರಯ ನೀಡೀದ್ದನೆಂಬ ಮಾಹಿತಿ ಇದ್ದು ಅದಕ್ಕಾಗಿ ನಾವು ಒಬೆರಾಯ್ ಅವರ ನಿವಾಸದ ಮೇಲೆ ದಾಳಿ ಮಾಡಿದ್ದೇವೆ. ಇದಕ್ಕಾಗಿ ನ್ಯಾಯಾಲಯದಿಂದ ವಾರಂಟ್ ತೆಗೆದುಕೊಂಡು ಸಿಸಿಬಿ ತಂಡ ಮುಂಬೈನ ಅವರ ಮನೆಗೆ ತೆರಳಿದೆ.

ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದಲ್ಲಿ ಅನೇಕ ದೊಡ್ಡದೊಡ್ಡ ಹೊಸರುಗಳು ಕೇಳಿ ಬಂದಿದೆ. ಅವುಗಳಲ್ಲಿ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಸಹ ಇದ್ದಾರೆ.

ಮೂಲಗಳ ಪ್ರಕಾರ, ಕಳೆದ ಒಂದು ತಿಂಗಳಿನಿಂದ ಪೊಲೀಸರು ಮಾದಕ ದ್ರವ್ಯ ಸೇವಿಸುವವರು, ಸರಬರಾಜುದಾರರು ಮತ್ತು ಪಾರ್ಟಿ ಆಯೋಜಕರ ವಿರುದ್ಧ ತನಿಖೆ ಕೈಗೊಂಡಿದ್ದಾರೆ.

ಸಿಸಿಬಿ ತಂಡ ಈ ಮೊದಲು ಆದಿತ್ಯ ಮನೆಯ ಮೇಲೆ ಸಹ ದಾಳಿ ಮಾಡಿತ್ತು.ಹೆಬ್ಬಾಳದ ಸಮೀಪವಿರುವ ಆದಿತ್ಯ ಮನೆ ‘ಹೌಸ್ ಆಫ್ ಲೈವ್ಸ್ ಅನ್ನು ಶೋಧಿಸಲಾಗಿದೆ.. ಈ ಆದಿತ್ಯ ಆಳ್ವಾ ಮಾಜಿ ಸಚಿವ ಜೀವರಾಜ್ ಅಳ್ವಾ ಅವರ ಪುತ್ರ. ಈತ ದೊಡ್ಡ ದೊಡ್ಡ ಪಾರ್ಟಿಗಳನ್ನು ನಡೆಸುವವನಿದ್ದನು ಎನ್ನಲಾಗಿದೆ. ಇವರ ಸಹೋದರಿ ಪ್ರಿಯಾಂಕಾ ಆಳ್ವಾ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರನ್ನು ಮದುವೆಯಾಗಿದ್ದರು.

ಮೂತ್ರದ ಮಾದರಿಯನ್ನು ಹಾಳು ಮಾಡಿದ್ದ ರಾಗಿಣಿ!

ಡ್ರಗ್ಸ್ ಪರೀಕ್ಷೆಯ ಸಮಯದಲ್ಲಿ ರಾಗಿಣಿ ಮೂತ್ರದಲ್ಲಿ ನೀರನ್ನು ಬೆರೆಸಿ ಮಾದರಿಯನ್ನು ಹಾಳು ಮಾಡಲು ಪ್ರಯತ್ನಿಸಿದರು. ಆ ಸಮಯ ಪೋಲೀಸರು ರು ಮತ್ತೆ ಅವರ ಸ್ಯಾಂಪಲ್ ತೆಗೆದುಕೊಂಡಿದ್ದರು.