Recent Posts

Sunday, January 19, 2025
ರಾಜ್ಯ

ಡ್ರಗ್ಸ್ ಪ್ರಕರಣ: ಕರ್ನಾಟಕದ ಕ್ರಿಕೆಟ್ ಪಟು, ಸದ್ಯದಲ್ಲೇ ವಿಚಾರಣೆ-ಕಹಳೆ ನ್ಯೂಸ್

ಬೆಂಗಳೂರು- ಡ್ರಗ್ಸ್ ಜಾಲಕ್ಕೆ ಸಂಬಂಸಿದಂತೆ ಕ್ರಿಕೆಟ್ ಆಟಗಾರರೊಬ್ಬರನ್ನು ಸಿಸಿಬಿ ಪೊಲೀಸರು ಸದ್ಯದಲ್ಲೇ ವಿಚಾರಣೆಗೆ ಒಳಪಡಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಆಟಗಾರ ಈಗಾಗಲೇ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಯರಾದ ರಾಗಿಣಿ ಮತ್ತು ಸಂಜನಾ ಆಪ್ತ ಎಂದು ಹೇಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿನ್ನೆಲೆಯಲ್ಲಿ ತನಿಖಾ ಅಧಿಕಾರಿಗಳು ಅವರನ್ನು ವಿಚಾರಣೆ ಗೊಳಪಡಿಸಲಿದ್ದಾರೆ. ಈಗಾಗಲೇ ಕೆಪಿಎಲ್ ಕ್ರಿಕೆಟ್ ತಂಡದ ಮಾಲೀಕ ಹಾಗೂ ಉದ್ಯಮಿಯೊಬ್ಬರನ್ನು ಸಿಸಿಬಿ ಪೊಲೀಸರು ವಿಚಾರಣೆಗೊಳಪಡಿಸಿ ದ್ದಾರೆ ಎಂದು ತಿಳಿದುಬಂದಿದೆ. ಅವರಿಂದ ಎರಡು ಮೊಬೈಲ್‍ಗಳನ್ನು ವಶಪಡಿಸಿಕೊಂಡಿರುವ ತನಿಖಾಕಾರಿಗಳು ಅವುಗಳನ್ನು ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.

ಕೆಪಿಎಲ್ ಕ್ರಿಕೆಟ್ ತಂಡದ ಮಾಲೀಕ ಮತ್ತು ಆಟಗಾರ ಈ ಇಬ್ಬರು ಕ್ರಿಕೆಟ್ ಪಂದ್ಯಾವಳಿ ಮುಗಿದ ನಂತರ ಮಾರತಹಳ್ಳಿಯಲ್ಲಿರುವ ಪ್ರತಿಷ್ಠಿತ ಕ್ಲಬ್‍ಗೆ ಹೋಗಿ ನಟಿಯೊಬ್ಬರೊಂದಿಗೆ ಪಾರ್ಟಿ ಮಾಡಿದ್ದಾರೆ ಎಂದು ಸಿಸಿಬಿ ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.