Recent Posts

Monday, January 20, 2025
ಹೆಚ್ಚಿನ ಸುದ್ದಿ

ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಯಡಿಯೂರಪ್ಪ ತುರ್ತು ವಿಡಿಯೋ ಕಾನ್ಫರೆನ್ಸ್!-ಕಹಳೆ ನ್ಯೂಸ್

 ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಡಳಿತಗಳ ಜೊತೆ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ವೀಡಿಯೋ ಕಾನ್ಫರೆನ್ಸ್ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದಲ್ಲಿ ಮಳೆ ಹಾಗೂ ಪ್ರವಾಹದಿಂದ ಉಂಟಾಗಿರುವ ಸ್ಥಿತಿಯ ಕುರಿತು ಯಡಿಯೂರಪ್ಪ ಮಾಹಿತಿ ಪಡೆದುಕೊಂಡರು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಪ್ರವಾಹ ಪೀಡಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಿದ್ದಾರೆ. ಇವತ್ತು ಕಂದಾಯ ಸಚಿವ ಆರ್. ಅಶೋಕ್ ಅವರು ಪ್ರವಾಹ ಪೀಡಿದ ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತಿದ್ದಾರೆ. ನದಿ ಪಾತ್ರದ ಗ್ರಾಮಗಳ ಜನರ ರಕ್ಷಣೆ, ಸ್ಥಳಾಂತರ ಮತ್ತು ಜಾನುವಾರುಗಳ ರಕ್ಷಣೆಯನ್ನು ಜಿಲ್ಲಾಡಳಿತ ಸರಿಯಾಗಿ ಮಾಡಬೇಕು. ಜಾನುವಾರುಗಳಿಗೆ ಮೇವು ಕೊರತೆಯಾಗದಂತೆ ನೋಡಿಕೊಳ್ಳಬೇಕು. ದಕ್ಷತೆ ಮತ್ತು ಮಾನವೀಯತೆಯಿಂದ ಪ್ರವಾಹ ಪರಿಹಾರ ಕಾರ್ಯಗಳನ್ನು ಮಾಡಿ ಎಂದು ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆಯಾ ಜಿಲ್ಲಾ ಉಸ್ತುವಾರಿ ಸಚಿವರ ಮಾರ್ಗದರ್ಶನದಲ್ಲಿ ಕೆಲಸ ಮಾಡಿ. ಜಿಲ್ಲಾಧಿಕಾರಿಗಳ ಪಿಡಿ ಅಕೌಂಟ್ ಮತ್ತು ಎನ್ ಡಿ ಆರ್ ಎಫ್ ನಿಧಿ ಬಳಕೆ ಮಾಡಿಕೊಂಡು ಪರಿಹಾರ ಕಾರ್ಯಗಳನ್ನು ತ್ವರಿತವಾಗಿ ಮಾಡಿ ಎಂದು ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಮುಖ್ಯ ಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ. ವಿ ರಮಣರೆಡ್ಡಿ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಬೆಳೆ ಪರಿಹಾರ ಜಮೆ ಮಾಡಿದ ಸಿಎಂ: ರಾಜ್ಯದಲ್ಲಿ ಅತಿವೃಷ್ಟಿಯಿಂದ ಬೆಳೆಹಾನಿಗೊಳಗಾದ 51,810 ರೈತರ ಬ್ಯಾಂಕ್ ಖಾತೆಗಳಿಗೆ 36.57 ಕೋಟಿ ರು.ಗಳ ಇನ್ ಪುಟ್ ಸಬ್ಸಿಡಿಯನ್ನು ಆನ್ ಲೈನ್ ಮೂಲಕ ಜಮೆ ಮಾಡಿದರು.