Sunday, November 24, 2024
ಹೆಚ್ಚಿನ ಸುದ್ದಿ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ-ಕಹಳೆ ನ್ಯೂಸ್

 ಕರ್ನಾಟಕ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ.ಒಟ್ಟು ಶೇ.51.28ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪೂರಕ ಪರೀಕ್ಷೆಯು ಸೆಪ್ಟೆಂಬರ್ 21 ರಿಂದ 29ರವರೆಗೆ ನಡೆದಿತ್ತು.

ಸುಮಾರು 1.1 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿ 65,652 ಬಾಲಕರು ಹಾಗೂ 44,067 ಮಂದಿ ಬಾಲಕಿಯರಿದ್ದರು.213955 ಮಂದಿ ಪರೀಕ್ಷೆಗೆ ಹಾಜರಾಗಿದ್ದರೆ 109719ಮಂದಿ ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷ 192181 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. 81614 ಮಂದಿ ಉತ್ತೀರ್ಣರಾಗಿದ್ದರು. ಆಗಸ್ಟ್ 10ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿತ್ತು. ಒಟ್ಟು 71.80ರಷ್ಟು ಶೇಕಡಾವಾರು ಫಲಿತಾಂಶವಾಗಿತ್ತು.ಸರ್ಕಾರಿ ಶಾಲೆಗಳ ಫಲಿತಾಂಶ ಶೇ. 72.79 ಅಷ್ಟಿದೆ. ಅನುದಾನಿತ ಶಾಲೆಗಳು 70.60, ಶೇ. 82.31, 2,28,734 ಅನುತ್ತೀರ್ಣರಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಾಲಕರು ಶೇ.66.41 ಉತ್ತೀರ್ಣರಾಗಿದ್ದಾರೆ 77.74 ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದಾರೆ, 625 ಅಂಕಕ್ಕೆ 625 ಅಂಕವನ್ನು ಆರು ವಿದ್ಯಾರ್ಥಿಗಳು ಪಡೆದಿದ್ದಾರೆ. ಕಳೆದ ಬಾರಿ ಇಬ್ಬರು ವಿದ್ಯಾರ್ಥಿಗಳು ಸಂಪೂರ್ಣ ಅಂಕ ತೆಗೆದುಕೊಂಡಿದ್ದರು. ಕರ್ನಾಟಕದಲ್ಲಿ 8,48,203 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ವಿದ್ಯಾರ್ಥಿಗಳು karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದು.