Recent Posts

Monday, January 20, 2025
ಸುದ್ದಿ

ಮಂಗಳೂರು ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿರುವ ಕೊರೊನಾ ವಾರಿಯರ್ :ಡಾ.ಆರತಿ ಕೃಷ್ಣ-ಕಹಳೆ ನ್ಯೂಸ್

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಶ್ರೀ ಜನಾರ್ದನ ಪೂಜಾರಿ ಅವರ ಆಶಯದಂತೆ ಮಂಗಳೂರು ದಸರಾ ಮಹೋತ್ಸವವು ‘ನಮ್ಮ ದಸರಾ – ನಮ್ಮ ಸುರಕ್ಷೆ’ ಘೋಷ ವಾಕ್ಯದಡಿ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿನ್ನೆಲೆಯಲ್ಲಿ ಎನ್‌ಆರ್‌ಐ ಫೋರಂನ ಮಾಜಿ ಉಪಾಧ್ಯಕ್ಷೆ ಹಾಗೂ ಕೊರೊನಾ ವಾರಿಯರ್ ಆಗಿ ಶ್ರಮಿಸಿದ ಡಾ.ಆರತಿ ಕೃಷ್ಣ ಅಕ್ಟೋಬರ್‌ 17 ರಂದು ಮಧ್ಯಾಹ್ನ 12 ಗಂಟೆಗೆ ಮಂಗಳೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಡಾ. ಆರತಿಕೃಷ್ಣ ಅವರು ಕೋವಿಡ್ ಸಂಕಷ್ಟ ಕಾಲದಲ್ಲಿ ಅನಿವಾಸಿ ಭಾರತೀಯರು ಯಾರೇ ಸಂಕಷ್ಟಕ್ಕೀಡಾಗಿದ್ದರು ಕೂಡ ಕೂಡಲೇ ಸ್ಪಂದಿಸಿ ಪರಿಹಾರ ಒದಗಿಸಿದ್ದಾರೆ‌. 6 ತಿಂಗಳಿನಲ್ಲಿ 40ಸಾವಿರಕ್ಕೂ ಅಧಿಕ ಅನಿವಾಸಿ ಭಾರತೀಯರನ್ನು ವಿದೇಶದಿಂದ ತಾಯ್ನಾಡಿಗೆ ಕಳುಹಿಸುವಲ್ಲಿ ಯಶಸ್ವಿಯಾಗಿದ್ದಾರೆ. ಎನ್‌ಆರ್‌ಐ ಸಂಸ್ಥೆಗಳಿಗೆ ಚಾರ್ಟರ್ ವಿಮಾನಕ್ಕೆ ಬೇಕಾದ ಅನುಮತಿಯನ್ನು ರಾಯಭಾರಿ ಕಚೇರಿ ಮೂಲಕ ಒದಗಿಸಿಕೊಡಲು ಬಹಳಷ್ಟು ಶ್ರಮಿಸಿದ್ದಾರೆ.