Monday, January 20, 2025
ಸುದ್ದಿ

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಉಚಿತ ಕನ್ನಡಕ ವಿತರಣೆ-ಕಹಳೆ ನ್ಯೂಸ್

ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ ಇದರ ಆಶ್ರಯದಲ್ಲಿ ಪ್ರಸಾದ್ ನೇತ್ರಾಲಯ ಮಂಗಳೂರು ಇವರು ಕಳೆದ ಜನವರಿ ತಿಂಗಳಿನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಿದ್ದರು.

ನೇತ್ರ ತಪಾಸಣಾ ಸಂದರ್ಭದಲ್ಲಿ ಕನ್ನಡಕದ ಅವಶ್ಯಕತೆಯನ್ನು ತಿಳಿಸಿರುವ ವ್ಯಕ್ತಿಗಳಿಗೆ ದಿನಾಂಕ 22.10.2020ರಂದು ಉಚಿತವಾಗಿ ಕನ್ನಡಕವನ್ನು ವಿತರಿಸಲಾಗುವುದು. ಈ ಕಾರ್ಯಕ್ರಮವು ಶ್ರೀರಾಮ ಪ್ರಾಥಮಿಕ ಶಾಲಾ ವಿಭಾಗದ ವೇದವ್ಯಾಸ ಧ್ಯಾನ ಮಂದಿರದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಸಾದ್ ನೇತ್ರಾಲಯ ಮಂಗಳೂರು ಇದರ ಸಂಸ್ಥಾಪಕರಾದ ಡಾ| ಕೃಷ್ಣಪ್ರಸಾದ್ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧ್ಯಕ್ಷರಾದ ಡಾ| ಪ್ರಭಾಕರ ಭಟ್ ಭಾಗವಹಿಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ ನೊಂದಣಿಯನ್ನು ಮಾಡಿಸಿಕೊಳ್ಳಬೇಕು. ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಕಾರ್ಯಾಕ್ರಮದಲ್ಲಿ ಭಾಗವಹಿಸಬೇಕಾಗಿ ವಿದ್ಯಾಸಂಸ್ಥೆಯ ಸಂಚಾಲಕರಾದ ವಸಂತ ಮಾಧವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು