Recent Posts

Monday, January 20, 2025
ಪುತ್ತೂರು

ಸುಭಾಷ್ ಪಟ್ಟಾಜೆಗೆ ಡಾಕ್ಟರೇಟ್ ಪದವಿ-ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆಯನ್ನು ನಿರ್ವಹಿಸಿದ ಸುಭಾಷ್ ಪಟ್ಟಾಜೆ ಅವರು ಡಾ. ಮಹೇಶ್ವರಿ ಯು. ಅವರ ಮಾರ್ಗದರ್ಶನದಲ್ಲಿ ಕಣ್ಣೂರು ವಿಶ್ವವಿದ್ಯಾನಿಲಯಕ್ಕೆ ಸಮರ್ಪಿಸಿದ ‘ಕನ್ನಡ ಮತ್ತು ಮಲಯಾಳಂ ಸಣ್ಣಕತೆಗಳಲ್ಲಿ ಪರಕೀಯ ಪ್ರಜ್ಞೆಯ ನೆಲೆಗಳು- ಒಂದು ತೌಲನಿಕ ಅಧ್ಯಯನ’ ಎಂಬ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ದೊರಕಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಚೆಡೆಕಲ್ಲು- ಪಟ್ಟಾಜೆ ನಿವಾಸಿ ವಿಘ್ನೇಶ್ವರ ಪಿ ಮತ್ತು ಸವಿತಾ ದಂಪತಿ ಪುತ್ರರಾಗಿರುವ ಇವರು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ 2016 ರಿಂದ 2020 ರವರೆಗೆ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ಪ್ರಸುತ್ತ ಇವರು ಶೇಣಿಯ ಶ್ರೀ ಶಾರದಾಂಬಾ ಹೈಯರ್ ಸೆಕೆಂಡರಿ ಸ್ಕೂಲಿನಲ್ಲಿ ಕನ್ನಡ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು