Recent Posts

Monday, January 20, 2025
ಹೆಚ್ಚಿನ ಸುದ್ದಿ

ಧರ್ಮಸ್ಥಳದಿಂದ ಹಾಲು ಉತ್ಪಾದಕ ಮಹಿಳಾ ಸಂಘಕ್ಕೆ 1 ಲಕ್ಷ ರೂ ದೇಣಿಗೆ ಹಸ್ತಾಂತರ-ಕಹಳೆ ನ್ಯೂಸ್

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಂಜೂರುಗೊಂಡ 1 ಲಕ್ಷ ಅನುದಾನವನ್ನು ಬಂದಾರು ಗ್ರಾಮದ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಅವರು ಡಿ.ಡಿ.ಯನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಗುರುವಾಯನಕೆರೆ ಯೋಜನಾ ಕಚೇರಿಯ ಯೋಜನಾಧಿಕಾರಿ ಯಶವಂತ್, ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟದ ವಲಯ ಅಧ್ಯಕ್ಷ ಕೃಷ್ಣ ಆಚಾರ್ಯ ಹಾಗೂ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷ ಮಮತಾ.ಕೆ, ಕಾರ್ಯನಿರ್ವಾಹಣಾಧಿಕಾರಿ ಭವ್ಯಾ.ಕೆ.ಎಸ್, ನಿರ್ದೇಶಕರಾದ ರಾಜೇಶ್ವರಿ, ಸಿಬ್ಬಂದಿ ಸುಮಿತ್ರಾ, ವಲಯ ಮೇಲ್ವಿಚಾರಕ ಮಾಧವ.ಎಂ, ಸೇವಾ ಪ್ರತಿನಿಧಿ ನಿರಂಜನ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು