Recent Posts

Monday, January 20, 2025
ಹೆಚ್ಚಿನ ಸುದ್ದಿ

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ : ನಟಿ ಸಂಜನಾ-ರಾಗಿಣಿ ಜಾಮೀನಿಗಾಗಿ ಬಾಂಬ್ ಬೆದರಿಕೆ ಪತ್ರ!-ಕಹಳೆ ನ್ಯೂಸ್

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ನಂಟು ಆರೋಪಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿರುವ ನಟಿ ರಾಗಿಣಿ ಹಾಗೂ ನಟಿ ಸಂಜನಾರನ್ನು ಬಿಡುಗಡೆ ಮಾಡದಿದ್ದರೆ ಬಾಂಬ್ ಹಾಕ್ತೀವಿ ಎಂದು ಎನ್ ಡಿ ಪಿ ಎಸ್ ಕೋರ್ಟ್ ನ್ಯಾಯಾಧೀಶರಿಗೆ ಬೆದರಿಕೆ ಕರೆ ಬಂದಿದೆ .

ಜಾಹೀರಾತು
ಜಾಹೀರಾತು
ಜಾಹೀರಾತು

ಡ್ರಗ್ಸ್ ಮಾಫಿಯಾ ನಂಟು ಪ್ರಕರಣ ಸಂಬಂಧ ಜೈಲಿನಲ್ಲಿರುವ ಮಾದಕ ನಟಿ ರಾಗಿಣಿ ಹಾಗೂ ಸಂಜನಾಗೆ ಜಾಮೀನು ನೀಡುವಂತೆ ಹಾಗೂ ಕೆಜಿ ಹಳ್ಳಿ ಡಿಜೆ ಹಳ್ಳಿ ಪ್ರಕರಣದಿಂದ ಹಿಂದೆ ಸರಿಯುವಂತೆ ಬೆದರಿಕೆ ಪತ್ರ ಬಂದಿದೆ. ಸೋಮವಾರ ಸಂಜೆ 5 ಗಂಟೆಯಿಂದ ತುಮಕೂರಿನಿಂದ ಸಿಸಿಹೆಚ್ ನ್ಯಾಯಾಲಯಕ್ಕೆ ಪತ್ರ ಬರೆದಿದ್ದು, ಪತ್ರದಲ್ಲಿ ಕವರ್ ನ ಒಳಗೆ ಬಾಂಬ್ ಇಟ್ಟಿದ್ದೇವೆ ಎಂದು ಬರೆದಿದ್ದಾರೆ,

ಜಾಹೀರಾತು
ಜಾಹೀರಾತು
ಜಾಹೀರಾತು

ಕೂಡಲೇ ಸ್ಥಳಕ್ಕೆ ಶ್ವಾನದಳ ಮತ್ತು ಬಾಂಬ್ ಡಿಟೆಕ್ಟಿವ್ ತಂಡ ಪರಿಶೀಲನೆ ನಡೆಸಿದಾಗ ಕವರ್ ನಲ್ಲಿ ಡಿಟೋನೇಟರ್ ಪತ್ತೆಯಾಗಿದೆ. ಪ್ರಕರಣ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನೊಂದು ಪತ್ರದಲ್ಲಿ ಡಿಸಿಪಿ ರವಿಕುಮಾರ್ ಅವರ ಹೆಸರಿಗೆ ಪತ್ರ ಬಂದಿದ್ದು, ರಾಗಿಣಿ ಸಂಜನಾಗೆ ಬೇಲ್ ಸಿಗದಿದ್ರೆ , ನೀವು ಹಾಗೂ ನಿಮ್ಮ ಸಂದೀಪ್ ಪಾಟೀಲ್ ಸುಮ್ಮನಿರದಿದ್ರೆ ಕಮಿಷನರ್ ಕಛೇರಿ ಸ್ಪೋಟಿಸುತ್ತೇವೆ ಎಂದು ಪತ್ರ ಬರೆಯಲಾಗಿದೆ.