Recent Posts

Monday, January 20, 2025
ಹೆಚ್ಚಿನ ಸುದ್ದಿ

ಪ್ರತಿಯೊಬ್ಬರಿಗೂ ನಿವೇಶನ, ಮನೆ ಒದಗಿಸುವುದು ಸರ್ಕಾರದ ಗುರಿ: ಮುಖ್ಯಮಂತ್ರಿ-ಬಿ.ಎಸ್.ಯಡಿಯೂರಪ್ಪ-ಕಹಳೆ ನ್ಯೂಸ್

ಶಿವಮೊಗ್ಗ: ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ನಿವೇಶನ ಒದಗಿಸುವುದು ನಮ್ಮ ಗುರಿಯಾಗಿದೆ. ಅಲ್ಲದೇ ಸರ್ಕಾರದಿಂದ ನಿವೇಶನ ನೀಡಿದ ಪ್ರತಿಯೊಬ್ಬರಿಗೂ ಮನೆ ಕಟ್ಟಿಕೊಡಬೇಕು ಎಂಬ ಆಪೇಕ್ಷೆ ಇದೆ. ಹಂತ ಹಂತವಾಗಿ ಮನೆಗಳನ್ನು ನಿರ್ಮಿಸುವುದು ಸರ್ಕಾರದ ಆದ್ಯತೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಆಯೋಜಿಸಲಾಗಿದ್ದ ವಿವಿಧ ಇಲಾಖೆಗಳ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಉದ್ಘಾಟಿಸಿದರು. ನಂತರ ಕಾರ್ಯಕ್ರಮದಲ್ಲಿ ಮಾತನಾಡಿ ಅವರು, ಯಾವುದೇ ಒಬ್ಬ ವ್ಯಕ್ತಿಗೂ ರಾಜ್ಯದಲ್ಲಿ ಸೂರಿನ ಕೊರತೆ ಯಾಗಬಾರದು. ಪ್ರತಿಯೊಬ್ಬರಿಗೂ ನಿವೇಶನ ನೀಡಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ನಿವೇಶನ ರಹಿತರ ಬಗ್ಗೆ ಮಾಹಿತಿ ಪಡೆಯಲು ಸರ್ವೆ ನಡೆಸುವುದಾಗಿ ತಿಳಿಸಿದರು. ಜನರ ಸಂಕಷ್ಟಕ್ಕೆ ಸ್ಪಂದಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಪ್ರತಿಯೊಬ್ಬರಿಗೂ ಮನೆ ಮನೆಗೆ ಹಕ್ಕುಪತ್ರ ತಲುಪಿಸಲಾಗುವುದು. ಮಧ್ಯವರ್ತಿಗಳಿಗೆ ಯಾರೂ ಹಣ ನೀಡಬಾರದು. ಯಾರಾದರೂ ದುಡ್ಡು ಕೇಳಿದರೆ ಜಿಲ್ಲಾಧಿಕಾರಿಗೆ ದೂರು ನೀಡುವಂತೆ ಅವರು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಾರಿ ಉತ್ತಮ ಮಳೆಯಾಗಿದ್ದು, ಕೃಷಿಯನ್ನು ಸುಸ್ತಿರಗೊಳಿಸುವುದು ಸರ್ಕಾರದ ಗುರಿಯಾಗಿದೆ. ಜಿಲ್ಲೆಯಲ್ಲಿ ಮೆಕ್ಕೆ ಜೋಳ ಉತ್ತಮವಾಗಿ ರೈತರು ಬೆಳೆದಿದ್ದಾರೆ. ಉತ್ತಮ ಫಸಲು ಬಂದಿದೆ. ಮೆಕ್ಕೆಜೋಳ ಕಾಳು ಬಿಡಿಸುವ ಯಂತ್ರವನ್ನು ರೈತರಿಗೆ ಸಬ್ಸಿಡಿ ದರದಲ್ಲಿ ಒದಗಿಸಲಾಗುತ್ತಿದೆ. ಇದಕ್ಕಾಗಿ ಶಿಕಾರಿಪುರ ತಾಲೂಕಿಗೆ 1.40 ಕೋಟಿ ರೂ ಅನುದಾನ ನಿಗದಿಪಡಿಸಲಾಗಿದೆ ಎಂದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಯಡಿಯೂರಪ್ಪ ಉತ್ತರ ಕರ್ನಾಟಕದ ನೆರೆ ಪೀಡಿತ ಜಿಲ್ಲೆಗಳಲ್ಲಿ ಅಕ್ಟೋಬರ್ 21 ರಂದು ವೈಮಾನಿಕ ಸಮೀಕ್ಷೆ ನಡೆಸುತ್ತೇನೆ ಎಂದು ತಿಳಿಸಿದರು.

ವೈಮಾನಿಕ ಸಮೀಕ್ಷೆಯ ಮೂಲಕ ನೆರೆ ಹಾನಿಯ ಪರಿಶೀಲನೆ ನಡೆಸುತ್ತೇನೆ. ಈಗಾಗಲೇ ನೆರೆ ಸಂತ್ರಸ್ಥರಿಗೆ ಪರಿಹಾರ ನೀಡುವ ಕಾರ್ಯ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಸಂತ್ರಸ್ಥರಿಗೆ ಇನ್ನೂ ಹೆಚ್ಚಿನ ಪರಿಹಾರ ನೀಡಲು ಕ್ರಮ ಕೈಗೊಳ್ಳುತ್ತೇನೆ ಎಂದರು.

: ಕಪಾಲ ಬೆಟ್ಟದಲ್ಲಿ ಏಸು ಪ್ರತಿಮೆ ನಿರ್ಮಾಣಕ್ಕೆ ಹೈಕೋರ್ಟ್ ತಡೆಯಾಜ್ಞೆ: ಹಿಂದೂ ಜಾಗರಣ ವೇದಿಕೆ ಸಂತಸ

ಸಂಸದ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ಶಿಕಾರಿಪುರ ತಾಲೂಕಿನ 14 ಗ್ರಾಮ ಪಂಚಾಯತ್ ವ್ಯಾಪ್ತಿಯ 403 ಫಲಾನುಭವಿಗಳಿಗೆ ಇಂದು ಹಕ್ಕುಪತ್ರ ವಿತರಿಸಲಾಗುತ್ತಿದೆ. ಮುಂದಿನ ಒಂದೆರಡು ವಾರಗಳ ಒಳಗಾಗಿ ಇನ್ನೂ 13 ಗ್ರಾಮ ಪಂಚಾಯತ್ ವ್ಯಾಪ್ತಿಯ 1 ಸಾವಿರ ಜನರಿಗೆ ಹಕ್ಕುಪತ್ರ ವಿತರಿಸಲಾಗುವುದು ಎಂದರು.
ಮುಖ್ಯಮಂತ್ರಿ ಅವರು ಈ ಸಂದರ್ಭದಲ್ಲಿ ನಿವೇಶನ ರಹಿತರಿಗೆ ಹಕ್ಕುಪತ್ರ, ಕೃಷಿಕರಿಗೆ ಕೃಷಿ ಯಂತ್ರೋಪಕರಣ, ವಿದ್ಯಾರ್ಥಿಗಳಿಗೆ ಲಾಪ್ ಟಾಪ್, ಆಕಸ್ಮಿಕವಾಗಿ ಸಾವಿಗೀಡಾದ ರೈತರಿಗೆ ಪರಿಹಾರ ಧನದ ಚೆಕ್ ವಿತರಣೆ ಮಾಡಿದರು.