Friday, April 4, 2025
ಹೆಚ್ಚಿನ ಸುದ್ದಿ

ಪೊಲೀಸರ ತ್ಯಾಗ,ಸಾಹಸ ಹಾಗೂ ಸೇವೆ ಸದಾ ಸ್ಮರಣೀಯ : ಪ್ರಧಾನಿ ಮೋದಿ-ಕಹಳೆನ್ಯೂಸ್

ನವದೆಹಲಿ: ಪೊಲೀಸ್ ಸಂಸ್ಮರಣಾ ದಿನವನ್ನು ಬುಧವಾರ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪೊಲೀಸರ ಸಾಹಸ ಹಾಗೂ ತ್ಯಾಗವನ್ನು ಕೊಂಡಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದರಿಂದ ಹಿಡಿದು ಭಯಾನಕ ಅಪರಾಧ ಪ್ರಕರಣಗಳನ್ನು ಬಗೆಹರಿಸುವವರೆಗೆ, ವಿಪತ್ತು ನಿರ್ವಹಣೆಗೆ ಸಹಾಯ ಮಾಡುವುದರಿಂದ ಹಿಡಿದು ಕೋವಿಡ್-19 ವಿರುದ್ಧ ಹೋರಾಡುವವರೆಗೆ, ಯಾವುದೇ ಹಿಂಜರಿಕೆಯಿಲ್ಲದೆ ನಮ್ಮ ಪೊಲೀಸ್ ಸಿಬ್ಬಂದಿಗಳು ಅತ್ಯುತ್ತಮ ಕಾರ್ಯನಿರ್ವಹಿಸುತ್ತಿದ್ದಾರೆ. ಜನ ಸೇವೆಯತ್ತ ಅವರ ಸಮರ್ಪಣೆ ಮತ್ತು ಸರ್ವ ಸನ್ನದ್ಧತೆಯ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪೊಲೀಸ್ ಸಂಸ್ಮರಣಾ ದಿನವು ನಮ್ಮ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಭಾರತದಾದ್ಯಂತ ಕೃತಜ್ಞತೆ ಸಲ್ಲಿಸುವ ಅವಕಾಶವಾಗಿದೆ. ಕರ್ತವ್ಯದ ಸಾಲಿನಲ್ಲಿ ಹುತಾತ್ಮರಾದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ನಾವು ಗೌರವ ಸಲ್ಲಿಸುತ್ತೇವೆ. ಅವರ ತ್ಯಾಗ ಮತ್ತು ಸೇವೆ ಯಾವಾಗಲೂ ನೆನಪಿನಲ್ಲಿ ಉಳಿಯುತ್ತದೆ ಎಂದು ತಿಳಿಸಿದ್ದಾರೆ.

ಈ ನಡುವೆ ನವದೆಹಲಿಯ ರಾಷ್ಟ್ರೀಯ ಪೊಲೀಸ್ ಸ್ಮಾರಕದಲ್ಲಿ ಇಂದು ಬೆಳಿಗ್ಗೆ ಹುತಾತ್ಮರಾದ ಪೊಲೀಸ್ ಸಿಬ್ಬಂದಿಗೆ ಗೃಹ ಸಚಿವ ಅಮಿತ್ ಶಾ ಗೌರವ ಸಲ್ಲಿಸಿದ್ದಾರೆ.

ರಾಷ್ಟ್ರಕ್ಕಾಗಿ ಪೊಲೀಸ್ ಸಿಬ್ಬಂದಿಯ ನಿಷ್ಠೆ ಮತ್ತು ಸರ್ವೋಚ್ಚ ತ್ಯಾಗವನ್ನು ಗೌರವಿಸಲು ಪ್ರತಿ ವರ್ಷ ಅಕ್ಟೋಬರ್ 21 ರಂದು ಈ ದಿನವನ್ನು ಆಚರಿಸಲಾಗುತ್ತದೆ.

 

 

 

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ