Sunday, January 19, 2025
ಕ್ರೈಮ್ಸುದ್ದಿ

ಬಿ.ಸಿ.ರೋಡ್ ಫ್ಲ್ಯಾಟ್ ನಲ್ಲಿ ಸುರೇಂದ್ರ ಬಂಟ್ವಾಳ್ ಬರ್ಬರ ಹತ್ಯೆ ; ಸ್ಥಳಕ್ಕೆ ಧಾವಿಸಿದ ಪೊಲೀಸರು, ಹತ್ಯೆಗೈದವರು ಯಾರು..!? – ಕಹಳೆ ನ್ಯೂಸ್

ಬಂಟ್ವಾಳ : ರೌಡಿ ಶೀಟರ್, ಚಲನಚಿತ್ರ ನಟ ಬಂಟ್ವಾಳ ನಿವಾಸಿ ಸುರೇಂದ್ರ ಬಂಟ್ವಾಳ್ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಇಂದು ಮಧ್ಯಾಹ್ನ ಬೆಳಕಿಗೆ ಬಂದಿದೆ.

ಸುರೇಂದ್ರ ಬಂಟ್ವಾಳ್ ಬಿಸಿರೋಡ್ ನಲ್ಲಿರುವ ತನ್ನ ಫ್ಲ್ಯಾಟ್ ನಲ್ಲಿ ವಾಸವಿದ್ದು ಇಂದು ಮಧ್ಯಾಹ್ನ ಸುಮಾರಿಗೆ ಪ್ರಕರಣ ಬೆಳಕಿಗೆ ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ಕೊಟ್ಟು ಪರಿಶೀಲನೆಯನ್ನು ನಡೆಸುತ್ತಿದ್ದಾರೆ. ಸುರೇಂದ್ರ ಬಂಟ್ವಾಳ್ ಜೊತೆಗಿದ್ದವರೇ ಕೃತ್ಯದಲ್ಲಿ ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ. ಭೂಗತ ಜಗತ್ತಿನ ಜೊತೆ ನಂಟು ಹೊಂದಿದ್ದ, ಸುರೇಂದ್ರರನ್ನು ಯಾರು ಯಾವ ಕಾರಣಕ್ಕೆ ಹತ್ಯೆಗೈದರು ಎನ್ನುವುದು ಪೊಲೀಸ್ ತನಿಖೆಯಿಂದ ಬೆಳಕಿಗೆ ಬರಬೇಕಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು