Sunday, January 19, 2025
ಪುತ್ತೂರುಸುದ್ದಿ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಸಮಿತಿ ಗೌರವಾಧ್ಯಕ್ಷರಾಗಿ ವಿ.ಬಿ.ಅರ್ತಿಕಜೆ, ಕಾನೂನು ಸಲಹೆಗಾರರಾಗಿ ಮಹೇಶ್ ಕಜೆ, ಗೌರವ ಸಲಹೆಗಾರರಾಗಿ ರಾಕೇಶ್ ಕಮ್ಮಾಜೆ – ಕಹಳೆ ನ್ಯೂಸ್

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಸಮಿತಿಯ ಗೌರವಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ಪ್ರೊ. ವಿ.ಬಿ.ಅರ್ತಿಕಜೆ ಮತ್ತು ಕಾನೂನು ಸಲಹೆಗಾರರಾಗಿ ಖ್ಯಾತ ನ್ಯಾಯವಾದಿ ಮಹೇಶ್‌ ಕಜೆರವರನ್ನು ನೇಮಕ‌ ಮಾಡಲಾಗಿದೆ.

ಹಿರಿಯ ಪತ್ರಕರ್ತರಾಗಿ, ಹಿರಿಯ ಸಾಹಿತಿಗಳಾಗಿ, ವಿಶ್ರಾಂತ ಪ್ರಾಧ್ಯಾಪಕರಾಗಿ, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಸೇರಿದಂತೆ ಸಾರಸ್ವತ ಲೋಕದಲ್ಲಿ ಗುರುತಿಸಿಕೊಂಡಿರುವ ಪ್ರೊ.ವಿ.ಬಿ.ಅರ್ತಿಕಜೆಯವರನ್ನು ಗೌರವಾಧ್ಯಕ್ಷರಾಗಿ ಮತ್ತು ಪುತ್ತೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾಗಿ, ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಮಾಜಿ ಸದಸ್ಯರಾಗಿ ಸಹಿತ ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಖ್ಯಾತ ನ್ಯಾಯವಾದಿ, ಕಜೆ ಲಾ ಛೇಂಬರ್ಸ್ ಮುಖ್ಯಸ್ಥ ಮಹೇಶ್ ಕಜೆರವರನ್ನು ಕಾನೂನು ಸಲಹೆಗಾರರಾಗಿ ಸರ್ವಾನುಮತದಿಂದ ಆಯ್ಕೆ‌ ಮಾಡಲಾಗಿದೆ. ಗೌರವ ಸಲಹೆಗಾರರಾಗಿ ಪುತ್ತೂರು ವಿವೇಕಾನಂದ ಕಾಲೇಜ್ ನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾಗಿದ್ದ ರಾಕೇಶ್ ಕುಮಾರ್ ಕಮ್ಮಾಜೆರವರನ್ನು ಆಯ್ಕೆ ಮಾಡಲಾಗಿದೆ. ಎಂದು ತಾಲೂಕು ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಶಾಂತಿನಗರ ಮತ್ತು ಪ್ರಧಾನ ಕಾರ್ಯದರ್ಶಿ ಗಣೇಶ್ ಕೆ. ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು