Monday, January 20, 2025
ಹೆಚ್ಚಿನ ಸುದ್ದಿ

ಇಂದು ರಾಜ್ಯೋತ್ಸವ ಪ್ರಶಸ್ತಿ ಪ್ರಕಟ : ನವೆಂಬರ್ 1 ಕ್ಕೆ ಸಮಾರಂಭ ಖಚಿತ!?-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರವು ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಪಟ್ಟಿ ಇಂದುಉ ಪ್ರಕಟಿಸುವ ಸಾಧ್ಯತೆ ಇದ್ದು, ನವೆಂಬರ್ 1 ರಂದು ಪ್ರಶಸ್ತಿ ಸಮಾರಂಭ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯ ಸರ್ಕಾರವು ಈ ವರ್ಷ 65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕಾಗಿತ್ತು. ಆದರೆ ಅಂತಿಮವಾಗಿ 80 ಜನರ ಆಯ್ಕೆಯಾಗಿದೆ. ಈ ಪಟ್ಟಿಯಲ್ಲಿ 15 ಹೆಸರಗಳನ್ನು ತೆಗೆಯುವ ಕಸರತ್ತು ನಡೆದಿದ್ದು, ಮೈಸೂರು ದಸರಾ ಮುಗಿದ ಬಳಿಕ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ಸಭೆ ನಡೆಸಿ ಪಟ್ಟಿಯನ್ನು 65 ಕ್ಕೆ ಇಳಿಸಿದ ಬಳಕ ರಾಜ್ಯೋತ್ಸವ ಪಟ್ಟಿ ಪ್ರಕಟವಾಗಲಿದೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು