Recent Posts

Sunday, January 19, 2025
ಸುದ್ದಿ

ಕಾಂಗ್ರೆಸ್ ಸರ್ಕಾರ 8 ಸಾವಿರ ಕೋಟಿ ರೂ. ಮೊತ್ತದ ರೈತರ ಸಾಲ ಮನ್ನಾ ಮಾಡಿದೆ: ರಾಹುಲ್ ಗಾಂಧಿ

ಮಂಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 8 ಸಾವಿರ ಕೋಟಿ ರೂ. ರಾಜ್ಯದ ರೈತರ ಸಾಲ ಮನ್ನಾ ಮಾಡಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಮೂರನೇ ಹಂತದ ಜನಾಶೀರ್ವಾದ ಯಾತ್ರೆ ಅಂಗವಾಗಿ ಮಂಗಳೂರಿನ ಕಾಪುವಿನಲ್ಲಿಂದು ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಕೆಲ ವರ್ಷಗಳಿಂದ ಬಿಜೆಪಿ ಸರ್ಕಾರ 15 ಶ್ರೀಮಂತರ 2.5 ಲಕ್ಷ ಕೋಟಿ ರೂ. ಮನ್ನಾ ಮಾಡಿದೆ ಎಂದು ಆರೋಪಿಸಿದರು.ರೈತರ ಸಾಲ ಮನ್ನಾ ಮಾಡಿ ಎಂದು ಪ್ರಧಾನಿ ನರೇಂದ್ರಮೋದಿ ಹಾಗೂ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರನ್ನು ಕೇಳಿದರೆ ,

ಜಾಹೀರಾತು
ಜಾಹೀರಾತು
ಜಾಹೀರಾತು
ಅದು ಕೇಂದ್ರ ಸರ್ಕಾರದ ನೀತಿ ಅಲ್ಲ ಎಂದು ಹೇಳುತ್ತಾರೆ ಎಂದು ಟೀಕಿಸಿದರು.ಪ್ರತಿಯೊಬ್ಬರ ಖಾತೆಗೂ 15 ಲಕ್ಷ ಹಣ  ಹಾಕುವುದಾಗಿ , ಪ್ರತಿವರ್ಷ 2 ಲಕ್ಷ ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ದೇಶದ ಜನತೆಗೆ ನೀಡಿದ್ದ ಭರವಸೆ ಈಡೇರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಟೀಕಿಸಿದರು.ಇದಕ್ಕೂ ಮುನ್ನ ಉಡುಪಿಯಲ್ಲಿ ಮೀನುಗಾರರ ಸಮುದಾಯಗಳೊಂದಿಗೆ ಚರ್ಚೆ ನಡೆಸಿದ ರಾಹುಲ್ ಗಾಂಧಿ, ರಾಜೀವ್ ಗಾಂಧಿ ರಾಜಕೀಯ ಶಿಕ್ಷಣ ಅಂತಾರಾಷ್ಟ್ರೀಯ ಅಕಾಡೆಮಿ ಉದ್ಘಾಟಿಸಿದರು. ಹೆಜ್ಜಾಡಿಯ ನಾರಾಯಣಗುರು ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

https://twitter.com/INCIndia/status/976028201632673793/photo/1

ಜಾಹೀರಾತು
ಜಾಹೀರಾತು
ಜಾಹೀರಾತು