Monday, January 20, 2025
ಸುಬ್ರಹ್ಮಣ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಅಭಿವೃದ್ಧಿ ಸಮಿತಿಯಲ್ಲಿ ಮಲೆಕುಡಿಯ ಜನಾಂಗದವರ ನಿರ್ಲಕ್ಷ್ಯಕ್ಕೆ ಮಲೆಕುಡಿಯ ಸಂಘದಿಂದ ಆಕ್ಷೇಪ – ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಅಭಿವೃದ್ಧಿ ಸಮಿತಿಯಲ್ಲಿ ಮಲೆಕುಡಿಯ ಜನಾಂಗದವರನ್ನು ಸೇರಿಸಿಕೊಳ್ಳದೆ ನಿರ್ಲಕ್ಷ್ಯ ಮಾಡಿರುವುದಾಗಿ ಆರೋಪಿಸಿ ಮಲೆಕುಡಿಯರ ಸಂಘ ವಲಯ ಸಮಿತಿ ಸುಬ್ರಹ್ಮಣ್ಯ ಪತ್ರಿಕಾ ಹೇಳಿಕೆ ಅ.31 ರಂದು ಬಿಡುಗಡೆ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನವಾಗಿ ಅಭಿವೃದ್ಧಿ ಸಮಿತಿ ರಚನೆಯಾಗಿದ್ದು ಸ್ಥಳೀಯ ಮೂಲ ನಿವಾಸಿಗಳಾದ ಮಲೆ ಕುಡಿಯ ಬುಡಕಟ್ಟು ಸಮುದಾಯವನ್ನು ನಿರ್ಲಕ್ಷಿಸಿದ್ದಾರೆ. ಈ ಹಿಂದಿನ ನಿರ್ದಾರದಂತೆ ಮಲೆಕುಡಿಯ ಜನಾಂಗದವರ ಕೋರಿಕೆಯನ್ನು ನಿರ್ಲಕ್ಷ್ಯ ಮಾಡಲಾಗಿದೆ. ಈ ಹಿಂದಿನ ವ್ಯವಸ್ಥಾಪನಾ ಸಮಿತಿಗಳಲ್ಲಿ ಮಲೆಕುಡಿಯರಿಗೆ ಅವಕಾಶ ಕಲ್ಪಿಸಲಾಗಿದೆ. ಈಗ ಆದೇಶ ವಾಗಿರುವ ಅಭಿವೃದ್ಧಿ ಸಮಿತಿಯನ್ನು ರದ್ದುಗೊಳಿಸಿ ಮಲೆಕುಡಿಯ ಜನಾಂಗದವರಿಗೆ ಅವಕಾಶ ಕಲ್ಪಿಸಬೇಕು. ಇಲ್ಲವಾದಲ್ಲಿ ಮಲೆಕುಡಿಯ ಜನಾಂಗದವರ ಸಂಘಟನೆಯು ಹೋರಾಟದ ಮೂಲಕ ನ್ಯಾಯ ಪಡೆಯಲಾಗುವುದು ಎಂದು ರಾಜ್ಯ, ಜಿಲ್ಲಾ, ತಾಲೂಕು ಮಲೆಕುಡಿಯರ ಸಮಿತಿಯ ಪರವಾಗಿ ಮಲೆಕುಡಿಯರ ಸಂಘ ವಲಯ ಸಮಿತಿ ಸುಬ್ರಹ್ಮಣ್ಯ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು