Monday, January 20, 2025
ಹೆಚ್ಚಿನ ಸುದ್ದಿ

ನವೆಂಬರ್ 5ರಂದು ಸಾರಿಗೆ ನೌಕರರಿಂದ ಬೃಹತ್ ಪ್ರತಿಭಟನೆ-ಕಹಳೆ ನ್ಯೂಸ್

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹಾಕಲು ಸಾರಿಗೆ ನೌಕರರು ಪ್ರತಿಭಟನೆ ನಡೆಸಲಿದ್ದಾರೆ. ನೌಕರರ ಪ್ರತಿಭಟನೆಯಿಂದಾಗಿ ಬಸ್ ಸಂಚಾರಕ್ಕೆ ತೊಂದರೆ ಉಂಟಾಗುವ ಸಾಧ್ಯತೆ ಇದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ (ಸಿಐಟಿಯು) ನೇತೃತ್ವದಲ್ಲಿ ಸ್ವಾತಂತ್ರ ಉದ್ಯಾನದಲ್ಲಿ ನವೆಂಬರ್ 5ರಂದು ಪ್ರತಿಭಟನೆ ನಡೆಸಲಾಗುತ್ತದೆ. ಕೋವಿಡ್‌ನಿಂದ ಮೃತಪಟ್ಟ ಸಾರಿಗೆ ನೌಕರರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ನೀಡಬೇಕು ಎಂಬುವುದು ಪ್ರಮುಖ ಬೇಡಿಕೆಯಾಗಿದೆ.
ಲಾಕ್ ಡೌನ್ ಬಳಿಕ ಸಾರಿಗೆ ನೌಕರರು ಕರ್ತವ್ಯಕ್ಕೆ ವಾಪಸ್ ಆಗಿದ್ದಾರೆ. ಆದರೆ ಪರಿಪೂರ್ಣ ಪ್ರಮಾಣದ ಕೆಲಸ ಅವರಿಗೆ ಸಿಗುತ್ತಿಲ್ಲ. ಒಂದು ವೇಳೆ ಕೆಲಸ ಬೇಕಾದರೆ ಘಟಕದ ಅಧಿಕಾರಿಗಳಿಗೆ ಲಂಚ ನೀಡಬೇಕು ಎಂದು ನೌಕರರು ಆರೋಪಿಸಿದ್ದಾರೆ.ಲಾಕ್ ಡೌನ್ ಅವಧಿಯಲ್ಲಿ ವೇತನ ನೀಡುವುದಕ್ಕೆ ನೌಕರರ ರಜೆ ಕಡಿತಗೊಳಿಸಲಾಗಿದೆ. ಹಲವು ಭತ್ಯೆಗಳನ್ನು ರದ್ದು ಮಾಡಲಾಗಿದೆ ಎಂದು ನೌಕರರು ಆರೋಪ ಮಾಡಿದ್ದಾರೆ.ಕೋವಿಡ್‌ನಿಂದಾಗಿ ಸಾರಿಗೆ ನೌಕರರು ಮೃತಪಟ್ಟರೆ 30 ಲಕ್ಷ ರೂ. ನೀಡುವುದಾಗಿ ಈ ಹಿಂದೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಘೋಷಣೆ ಮಾಡಿದ್ದರು. ಇದುವರೆಗೆ ಅದನ್ನು ನೀಡಲು ಕ್ರಮ ಕೈಗೊಂಡಿಲ್ಲ ಎಂದು ನೌಕರರು ದೂರಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ ಕರೆ ನೀಡಿರುವ ಪ್ರತಿಭಟನೆಯಲ್ಲಿ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ನೌಕರರು ಪಾಲ್ಗೊಳ್ಳುವ ಸಾಧ್ಯತೆ ಇದ್ದು, ಇದರಿಂದಾಗಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.