Monday, January 20, 2025
ಜಿಲ್ಲೆ

ಯಡಿಯೂರಪ್ಪ ಬದಲಾವಣೆ ಸುದ್ದಿ; ನಡೆಯಿತು ಮಹತ್ವದ ಸಭೆ! -ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬದಲಾವಣೆಯಾಗಲಿದೆಯೇ?. ಕರ್ನಾಟಕ ಬಿಜೆಪಿಯಲ್ಲಿ ಆಗಾಗ ಈ ಪ್ರಶ್ನೆ ಕೇಳಿ ಬರುತ್ತಿದೆ. ಇದನ್ನು ತಳ್ಳಿ ಹಾಕುವ ನಾಯಕರ ಸಂಖ್ಯೆಯೂ ಪಕ್ಷದಲ್ಲಿಯೇ ದೊಡ್ಡದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದರೆ ಮುಂದೇನು?. ಭಾನುವಾರ ಬೆಂಗಳೂರಿನಲ್ಲಿ ಈ ಕುರಿತು ಮಹತ್ವದ ಸಭೆಯೊಂದು ನಡೆದಿದೆ. ಯಡಿಯೂರಪ್ಪ ಬಳಿಕ ಲಿಂಗಾಯತ-ವೀರಶೈವ ಸಮುದಾಯದವೇ ಸಿಎಂ ಆಗಬೇಕು ಎಂದು ತೀರ್ಮಾನ ಕೈಗೊಳ್ಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅಶೋಕ ಬಿ. ಹಿಂಚಿಗೇರಿ ಅಧ್ಯಕ್ಷತೆಯಲ್ಲಿ ಲಿಂಗಾಯತ-ವೀರಶೈವ ಸಮಾಜದ ಮುಖಂಡರ ಸಭೆ ನಡೆಯಿತು. ಸರ್ವಭೂಷಣ ಮಠದ ಮಲ್ಲಿಕಾರ್ಜುನ ದೇವರು ಸೇರಿದಂತೆ ಸಮಾಜದ ವಿವಿಧ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.
“ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮಗನ ಉದ್ಧಾರಕ್ಕಾಗಿ ಸಮಾಜವನ್ನು ಬಲಿಕೊಡುತ್ತಿದ್ದಾರೆ. ಬಿ. ವೈ. ವಿಜಯೇಂದ್ರ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ” ಎಂದು ಹೈಕೋರ್ಟ್‌ನ ಹಿರಿಯ ವಕೀಲ ಗಂಗಾಧರ ಅವರು ಹೇಳಿದರು.