Friday, April 11, 2025
ಶಿಕ್ಷಣ

ಶಾಲೆಗಳ ಆರಂಭ ವಿಚಾರ: ಶಿಕ್ಷಣ ಇಲಾಖೆಯಿಂದ ಇಂದು ಮಹತ್ವದ‌ ಸಭೆ -ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತಂತೆ ಇಂದು ಸಾರ್ವಜನಿಕ ಶಿಕ್ಷಣ ಇಲಾಖೆ ಇಂದು ಮಹತ್ವದ ಸಭೆ ನಡೆಸಲಿದ್ದು, ಶಾಲೆಗಳ ಪುನಾರಂಭ ಕುರಿತಂತೆ ಇಂದು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಹೀಗಾಗಿ ಶೀಘ್ರದಲ್ಲೇ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಚರ್ಚೆ ನಡೆಸಲಿದ್ದು, ಬಳಿಕ ಸರ್ಕಾರದ ಮುಂದೆ ತಮ್ಮ ಅಭಿಪ್ರಾಯ ತಿಳಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈಗಾಗಲೇ ಶಿಕ್ಷಣ ಇಲಾಖೆ ಶಾಲೆ ಆರಂಭದ ಕುರಿತಂತೆ ಸಂಸದರು, ಶಾಸಕರಿಗೆ ಪತ್ರ ಬರೆದು ಅಭಿಪ್ರಾಯ ಸಂಗ್ರಹಿಸಿದ್ದಾರೆ. ಇದೀಗ ಶಿಕ್ಷಣ ಇಲಾಖೆಯ ಅಧಿಕಾರಿಗಳಿಂದ ಅಭಿಪ್ರಾಯ ಸಂಗ್ರಹಿಸಿ ಮುಂದಿನ ನಿರ್ಧಾರ ಏನು ಎಂಬುದನ್ನು ತಿಳಿಸಲಿದೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ