ದ.ಕನ್ನಡದ ಭೌಗೋಳಿಕ ಸ್ವರೂಪ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ-ಈಶ್ವರ ಪ್ರಸಾದ್ ಕೆ.ಎಸ್ -ಕಹಳೆ ನ್ಯೂಸ್
ಇಂದು ದ.ಕನ್ನಡ ಜಿಲ್ಲೆಯು ಆರ್ಥಿಕವಾಗಿ ಬಹಳಷ್ಟು ಮುಂದುವರಿದಿದ್ದು ಇಲ್ಲಿಯ ಭೌಗೋಳಿಕ ಲಕ್ಷಣವೂ ಇದಕ್ಕೆ ಪೂರಕವಾಗಿದೆ. ಅಲ್ಲದೇ ಇಲ್ಲಿಯ ನಿರಂತರವಾದ ಕೃಷಿ ಚಟುವಟಿಕೆಯಿಂದಾಗಿ ನಮ್ಮ ಜಿಲ್ಲೆಯು ಇಂದು ದೇಶದ ಆರ್ಥಿಕ ಚಟುವಟಿಕೆಯಲ್ಲಿ ಸಿಂಹಪಾಲನ್ನು ಪಡೆದಿದೆ ಎಂದು ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥ ಈಶ್ವರ ಪ್ರಸಾದ್ ಕೆ,ಎಸ್ ಹೇಳಿದರು.
ಇವರು ಪುತ್ತೂರಿನ ವಿವೇಕಾನಂದ ಕಾಲೇಜಿನ ಸುವರ್ಣಮಹೋತ್ಸವ ಸಭಾಭವನದಲ್ಲಿ ನಡೆದ ಸಂಸ್ಕøತಿ- ಪ್ರಸ್ತುತಿ ಸರಣಿ ಕಾರ್ಯಕ್ರಮದಲ್ಲಿ ಸಮನ್ವಯಕಾರರಾಗಿ ಭಾಗವಹಿಸಿ ಭಾರತ ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ದಕ್ಷಿಣ ಕನ್ನಡದ ಪಾತ್ರ ಅಮೋಘವಾದುದು ಎಂದರು. ಈ ಸಂದರ್ಭದಲ್ಲಿ ಕಾಲೇಜಿನ ಆರ್ಥಶಾಸ್ತ್ರ ವಿಭಾಗದ ಉಪನ್ಯಾಸಕ ಡಾ.ವಿಷ್ಣು ಕುಮಾರ್ ಮಾತನಾಡಿ ದ.ಕನ್ನಡ ಜಿಲ್ಲೆಯಲ್ಲಿ ಬ್ರಿಟಿಷರ ಕಾಲದಿಂದಲೂ ಆರ್ಥಿಕ ಚಟುವಟಿಕೆಗಳಿಗೆ ಬಹಳಷ್ಟು ಪ್ರಾಮುಖ್ಯತೆ ದೊರೆತಿದೆ. ಅಲ್ಲದೇ ಬ್ರಿಟಿಷರು ಈ ಜಿಲ್ಲೆಯನ್ನು ಆರ್ಥಿಕವಾಗಿ ಅಭಿವೃದ್ಧಿಗೊಳಿಸಲು ತಮ್ಮದೇ ಆದ ವಿಶೇಷವಾದ ಕೊಡುಗೆಗಳನ್ನು ನೀಡಿದ್ದಾರೆ ಎಂದರು.ಇದೇ ಸಂದರ್ಭದಲ್ಲಿ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ರೀಮತಿ ಲಕ್ಷ್ಮೀ ಭಟ್ ಮಾತನಾಡಿ ದ.ಜಿಲ್ಲೆಯು ಆರ್ಥಿಕವಾಗಿ ಬಹಳಷ್ಟು ಮುಂದುವರೆದಿದೆಯಾದರೂ ಕೂಡಾ ಇಲ್ಲಿ ಬಹಳಷ್ಟು ಬದಲಾವಣೆ ಆಗಬೇಕಾಗಿದೆ. ಭಾರತ ಇಂದು ಆತ್ಮ ನಿರ್ಭರವಾಗಬೇಕಾಗಿದೆ. ಅಲ್ಲದೇ ಅಭಿವೃದ್ದಿಯ ನಿಟ್ಟಿನಲ್ಲಿ ಜಿಲ್ಲೆಯನ್ನು ನಾವು ಕಲುಷಿತಗೊಳಿಸಬಾರದು ಎಂದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೋ.ವಿ.ಜಿ.ಭಟ್ ಉಪಸ್ಥಿತರಿದ್ದರು. ಕಾಲೇಜಿನ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಉಪನ್ಯಾಸಕ ವರ್ಷಿತ್ ಇವರು ಕಾರ್ಯಕ್ರಮವನ್ನು ನಿರ್ವಹಿಸಿದರು ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದ ಉಪನ್ಯಾಸಕ ರಾಘವೇಂದ್ರ ವಂದಿಸಿದರು.