Saturday, November 23, 2024
ರಾಷ್ಟ್ರೀಯ

ಅಧಿಕ ಸಂಖ್ಯೆಯಲ್ಲಿ ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಸಾಕಾರಗೊಳಿಸಿ : ಗಣ್ಯರ ಮನವಿ -ಕಹಳೆ ನ್ಯೂಸ್

ನವದೆಹಲಿ-ಬಿಹಾರದ 94 ವಿಧಾನಸಭಾ ಕ್ಷೇತ್ರಗಳ ಚುನಾವಣೆ ಹಾಗೂ 10 ರಾಜ್ಯಗಳ 54 ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಮತದಾರರಿಗೆ ಕರೆ ನೀಡಿ ಅಧಿಕ ಸಂಖ್ಯೆಯಲ್ಲಿ ತಮ್ಮ ಹಕ್ಕುಗಳನ್ನು ಚಲಾಯಿಸುವಂತೆ ಕೋರಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೊರೊನಾ ನಿಯಮಗಳನ್ನು ಪಾಲಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಮತದಾರರು ಮತದಾನ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ಡಾ. ಎಂ. ವೆಂಕಯ್ಯನಾಯ್ಡು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚುನಾವಣೆಗಳು ನಡೆಯುತ್ತಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ವಿವಿಧ ಪಕ್ಷಗಳ ಮುಖಂಡರು ಕರೆ ನೀಡಿದ್ಧಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮತದಾರರು ಅಧಿಕ ಸಂಖ್ಯೆಯಲ್ಲಿ ಮತದಾನ ಮಾಡಿ ಪ್ರಜಾಪ್ರಭುತ್ವದ ಹಬ್ಬವನ್ನು ಸಾಕಾರಗೊಳಿಸುವಂತೆ ಗಣ್ಯರು ಸಲಹೆ ಮಾಡಿದ್ದಾರೆ. ಇಂದು ಬೆಳಗ್ಗೆ 7 ಗಂಟೆಗೆ ಚುನಾವಣೆ ಆರಂಭಕ್ಕೂ ಮುನ್ನ ಗಣ್ಯರು ಟ್ವೀಟ್ ಮೂಲಕ ಮತದಾರರಿಗೆ ತಮ್ಮ ಪವಿತ್ರ ಹಕ್ಕುಗಳನ್ನು ಕಡ್ಡಾಯವಾಗಿ ಚಲಾಯಿಸುವಂತೆ ಕೋರಿದ್ದಾರೆ.