Recent Posts

Monday, January 20, 2025
ಸುದ್ದಿ

ಮಂಗಳೂರು: ರಾಜ್ಯದಲ್ಲಿ ಲವ್ ಜಿಹಾದ್ ಕಡೆಗಾಣಿಸಲು ಕಠಿಣ ಕ್ರಮ: ಸಿಎಂ ಯಡಿಯೂರಪ್ಪ-ಕಹಳೆ ನ್ಯೂಸ್

ಹಣದ ಆಮಿಷ, ಪ್ರೀತಿ ಪ್ರೇಮದಲ್ಲಿ ನಡೆಯುವ ಮತಾಂತರಕ್ಕೆ ಬ್ರೇಕ್ ಹಾಕುತ್ತೇವೆ. ರಾಜ್ಯದಲ್ಲಿ ಲವ್ ಜಿಹಾದ್ ಕಡೆಗಾಣಿಸಲು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರಿನಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ರಾಜ್ಯ ಮಾದರಿಯಾಗಿ ಬೆಳೆಯುತ್ತಿದೆ. ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾವನ್ನು ಮಟ್ಟ ಹಾಕುತ್ತಿದ್ದೇವೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

18 ಮಂದಿಯ ಸಹಾಯದಿಂದ ನಾವು ಮತ್ತೊಮ್ಮೆ ಅಧಿಕಾರಕ್ಕೆ ಬಂದಿದ್ದೇವೆ. ಬಿಜೆಪಿ ಪಕ್ಷ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತದೆ. ನರೇಂದ್ರ ಮೋದಿಯವರ ನೇತೃತ್ವದಲ್ಲಿ ಉತ್ತಮ ಆಡಳಿತ ನೀಡಲಾಗುತ್ತಿದೆ. ಬಿಜೆಪಿ ಪಕ್ಷದ ಬಲವರ್ಧನೆಯೇ ನಮ್ಮ ಗುರಿ. ಯಾವುದೇ ಚುನಾವಣೆಯನ್ನು ಲಘುವಾಗಿ ತೆಗೆದುಕೊಳ್ಳುವಂತಿಲ್ಲ. ಬರುವಂತಹ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬರಬೇಕು, ಅಧಿಕಾರದ ಮೂಲಕ ಜನರ ಸೇವೆ ಮಾಡಬೇಕು ಎಂದರು.
ಆರ್. ಆರ್. ನಗರ ಉಪಚುನಾವಣೆಯಲ್ಲಿ ನಾವು 40,000 ಕ್ಕಿಂತಲೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇವೆ. ಶಿರಾದಲ್ಲಿ ನಾವು 25,000 ಕ್ಕಿಂತ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇವೆ. ಶಿಕ್ಷಕರ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸೋಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಂಗಳೂರು ಮಹಾನಗರ ಪಾಲಿಕೆ ಸೇರಿ ಹತ್ತು ಪಾಲಿಕೆಗಳಿಗೆ ತಲಾ 50 ಕೋ.ರೂ ಮಂಜೂರು ಮಾಡಲಾಗುವುದು. ಸಮುದ್ರದ ಅಲೆಗಳಿಂದ ವಿದ್ಯುತ್ ತಯಾರಿಕೆಗೂ ಆದ್ಯತೆ ನೀಡಲಾಗುವುದು. ಪ್ರವಾಸೋದ್ಯಮ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಯೋಜನೆ ಮಾಡಲಾಗುತ್ತಿದ್ದು, ಉದ್ಯೋಗ ಅವಕಾಶಗಳನ್ನು ಸಿಗುವಂತೆ ಯೋಜನೆ ರೂಪಿಸುತ್ತಿದ್ದೇವೆ ಎಂದು ಸಿಎಂ ಬಿಎಸ್ ವೈ ಹೇಳಿದರು.