Recent Posts

Sunday, January 19, 2025
ರಾಜ್ಯ

ಒಂದು ವರ್ಷ ವಿದ್ಯುತ್ ದರ ಏರಿಕೆ ಬರೆ ಬೇಡ :ಕುಮಾರಸ್ವಾಮಿ -ಕಹಳೆ ನ್ಯೂಸ್

ಬೆಂಗಳೂರು- ರಾಜ್ಯದಲ್ಲಿ ವ್ಯಾಪಕವಾಗಿ ಹರಡಿರುವ ಕೊರೊನಾ ಸೋಂಕು ಹಾಗೂ ನೆರೆ ಹಾವಳಿಯಿಂದ ಜನರು ತತ್ತರಿಸಿರುವ ಹಿನ್ನೆಲೆಯಲ್ಲಿ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಸಂಕಷ್ಟದಲ್ಲಿರುವ ಜನರ ಮೇಲೆ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಹೊರೆಯನ್ನು ಹೊರಿಸಬಾರದು ಎಂದು ಅವರು ಟ್ವೀಟರ್‍ನಲ್ಲಿ ಒತ್ತಾಯಿಸಿದ್ದಾರೆ. ಕೊರೊನಾ ಸೋಂಕು ತಗುಲಿದ ನಂತರ ನಾಡಿನ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಎಲ್ಲಾ ವಲಯಗಳು ನಷ್ಟದ ಸುಳಿವಿಗೆ ಸಿಲುಕಿವೆ. ಜನರು ಉದ್ಯೋಗ, ವೇತನ ಇಲ್ಲದೆ ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯುತ್ ದರ ಏರಿಕೆಯನ್ನು ಮುಂದೂಡುವುದು ಒಳಿತು ಎಂದು ಅವರು ಸಲಹೆ ಮಾಡಿದ್ದಾರೆ. ಪ್ರತಿ ಯೂನಿಟ್‍ಗೆ 20ರಿಂದ 50 ಪೈಸೆ ವರೆಗೆ ಅಂದರೆ ಸರಾಸರಿ 40 ಪೈಸೆ ಹೆಚ್ಚಳ ಮಾಡಿರುವುದು ಜನರಿಗೆ ಮತ್ತಷ್ಟು ಹೊರೆಯಾಗಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹೀಗಾಗಿ ಒಂದು ವರ್ಷ ಕಾಲ ದರ ಏರಿಕೆಯ ನಿರ್ಧಾರವನ್ನು ರಾಜ್ಯ ಸರ್ಕಾರ ಕೈ ಬಿಡಬೇಕೆಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.