Recent Posts

Monday, January 20, 2025
ರಾಷ್ಟ್ರೀಯ

ಹೊಸ ವರ್ಷದಿಂದ ಫಾಸ್ಟ್ ಟ್ಯಾಗ್ ಕಡ್ಡಾಯ – ಕಹಳೆ ನ್ಯೂಸ್

ನವದೆಹಲಿ : ಹೊಸ ವರ್ಷದ ದಿನದಿಂದ ಫಾಸ್ಟ್ ಟ್ಯಾಗ್ ಅನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಕಡ್ಡಾಯವಾಗಿ ಜಾರಿಗೊಳಿಸಲು ಆದೇಶಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೇಂದ್ರೀಯ ಮೋಟಾರು ವಾಹನ ನಿಯಮ 1989ರ ಅನ್ವಯ 2017ರ ಡಿಸೆಂಬರ್ 1 ರ ನಂತರ ನೋಂದಾಯಿಸಲ್ಪಟ್ಟಿರುವ ಎಲ್ಲಾ ಹೊಸ ನಾಲ್ಕು ಚಕ್ರದ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯ ಗೊಳಿಸಲಾಗಿದ್ದು, ಅವುಗಳನ್ನು ವಾಹನ ಉತ್ಪಾದಕರು ಅಥವಾ ಡೀಲರ್ ಗಳು ಪೂರೈಸಬೇಕಾಗಿದೆ. 2021ರ ಜನವರಿ 1ರಿಂದ ಎಲ್ಲ ನಾಲ್ಕು ಚಕ್ರದ ವಾಹನಗಳಿಗೆ ಫಾಸ್ಟ್ ಟ್ಯಾಗ್ ಅಳವಡಿಕೆ ಕಡ್ಡಾಯಗೊಳಿಸಿದೆ

ಜಾಹೀರಾತು
ಜಾಹೀರಾತು
ಜಾಹೀರಾತು

ಸಾರಿಗೆ ವಾಹನಗಳಿಗೆ ಫಾಸ್ಟ್ ಟ್ಯಾಗ್ ಅಳವಡಿಕೆಯ ನಂತರವೇ ಅವುಗಳ ಕ್ಷಮತಾ ಪ್ರಮಾಣಪತ್ರ(ಫಿಟ್ ನೆಸ್ ಸರ್ಟಿಫಿಕೇಟ್) ಅನ್ನು ನವೀಕರಣ ಮಾಡಿಕೊಡಬೇಕು ಎಂದು ಕಡ್ಡಾಯಗೊಳಿಸಲಾಗಿದೆ. ಜೊತೆಗೆ 2019ರ ಅಕ್ಟೋಬರ್ 1ರಿಂದೀಚೆಗೆ ರಾಷ್ಟ್ರೀಯ ಪರ್ಮಿಟ್ ಹೊಂದಿರುವ ಎಲ್ಲ ವಾಹನಗಳಿಗೆ ಫಾಸ್ಟ್ ಟ್ಯಾಗ್ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ.