ಹೈದರಾಬಾದ್ : ತೆಲುಗಿನ ಚಿತ್ರರಂಗದ ಮೆಗಾಸ್ಟಾರ್ ಎಂದೇ ಖ್ಯಾತಿ ಪಡೆದಿರುವಂತ ನಟ ಚಿರಂಜೀವಿ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಅವರ ಮನೆಯಲ್ಲಿಯೇ ಹೋಂ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವ ಮೆಗಾಸ್ಟಾರ್ ಚಿರಂಜೀವಿಯವರು, ಆಚಾರ್ಯ ಚಿತ್ರದ ಚೂಟಿಂಗ್ ನಲ್ಲಿ ಭಾಗವಹಿಸುವಂತ ಮೊದಲು, ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಟ್ಟಿದೆ. ನನಗೆ ಯಾವುದೇ ರೋಗದ ಲಕ್ಷಣಗಳಿಲ್ಲದೇ ಇದ್ದರೂ, ತಮ್ಮ ಕೊರೋನಾ ಸೋಂಕು ಪತ್ತೆ ಪರೀಕ್ಷೆಯ ವರದಿಯಲ್ಲಿ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ನಾನು ಸ್ವಯಂ ಹೋಂ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದಿದ್ದಾರೆ.
ಇನ್ನೂ ಮುಂದುವರೆದು, ಕಳೆದ 5 ದಿನಗಳಿಂದ ನನ್ನ ಸಂಪರ್ಕದಲ್ಲಿದ್ದಂತ ಎಲ್ಲರೂ ಕೊರೋನಾ ಸೋಂಕು ಪರೀಕ್ಷೆಗೆ ಒಳಪಡಿ. ಕೊರೋನಾ ಸೋಂಕಿನ ಲಕ್ಷಣಗಳಿದ್ದರೇ ತಪ್ಪದೇ ಪರೀಕ್ಷೆಗೆ ಒಳಪಟ್ಟು, ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುವಂತೆ ಮನವಿ ಮಾಡಿದ್ದಾರೆ. ಜೊತೆಗೆ ತನ್ನ ಕೊರೋನಾ ಚಿಕಿತ್ಸೆ, ಗುಣಮುಖತೆಯ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ನೀಡುವುದಾಗಿಯೂ ತಿಳಿಸಿದ್ದಾರೆ.