Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್‌ರವರಿಗೆ `ಸಹಕಾರಿ ರತ್ನ’ ಪ್ರಶಸ್ತಿ – ಕಹಳೆ ನ್ಯೂಸ್

ಪುತ್ತೂರು:ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್‌ರವರು ರಾಜ್ಯ ಸರಕಾರದಿಂದ ಕೊಡಲ್ಪಡುವ `ಸಹಕಾರಿ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಸುಳ್ಯ ತಾಲೂಕು ಐವರ್ನಾಡು ಗ್ರಾಮದ ಕೋಲ್ಚಾರ್ ನಿವಾಸಿಯಾಗಿರುವ ಚಂದ್ರ ಕೋಲ್ಚಾರ್ ವಾಣಿಜ್ಯ ಪದವೀಧರರಾಗಿರುತ್ತಾರೆ. ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ನಿರ್ದೇಶಕರಾಗಿ, ಕಳೆದ ನಾಲ್ಕು ವರ್ಷಗಳಿಂದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಐವರ್ನಾಡು ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ೮ ವರ್ಷ ಅಧ್ಯಕ್ಷ, ೧೫ ವರ್ಷ ನಿರ್ದೇಶಕ, ದ.ಕ ಸಹಕಾರಿ ಮಾರಾಟ ಸಂಘ ಮಂಗಳೂರು ಇದರಲ್ಲಿ ೧೦ ವರ್ಷ ನಿರ್ದೇಶಕ, ಐವರ್ನಾಡು ರಬ್ಬರ್ ಉತ್ಪಾದಕರ ಸಂಘದ ಸ್ಥಾಪಕ ಅಧ್ಯಕ್ಷ, ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಲ್ಲಿ ೫ ವರ್ಷ ನಿರ್ದೇಶಕ, ಸುಳ್ಯ ವೆಂಕಟ್ರಮಣ ಕ್ರೆಡಿಟ್ ಕೋ-ಆಪರಠಿವ್ ಸೊಸೈಟಿಯ ಅಧ್ಯಕ್ಷನಾಗಿ ಸೇವೆ ಸಲ್ಲಿಸಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇವರ ಅವಧಿಯಲ್ಲಿ ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘಕ್ಕೆ ೨೦೧೯ರಲ್ಲಿ `ರಾಜ್ಯದ ಅತ್ಯುತ್ತಮ ಸಹಕಾರಿ ಸಂಘ’, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಕಳೆದ ಮೂರು ವರ್ಷಗಳಿಂದ ಸತತ `ಅತ್ಯುತ್ತಮ ಸಹಕಾರಿ ಸಂಘ’ ಪ್ರಶಸ್ತಿ, ಸುಳ್ಯ ವೆಂಕಟ್ರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷನಾಗಿ ಅಖಿಲ ಭಾರತ ಸಹಕಾರಿ ಸಪ್ತಾಹದಲ್ಲಿ ಸತತ ಮೂರು ಭಾರಿ `ರಾಜ್ಯ ಪ್ರಶಸ್ತಿ’, ಒಂದು ಭಾರಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ `ಉತ್ತಮ ಸಹಕಾರಿ ಸಂಘ ಪ್ರಶಸ್ತಿ, ೨೦೧೬ರಲ್ಲಿ ಧಾರವಾಡದಲ್ಲಿ ನಡೆದ ೬೩ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ರಾಜ್ಯದ `ಉತ್ತಮ ಸಹಕಾರಿ ಪ್ರಶಸ್ತಿ’, ಶ್ರೀಜ್ಞಾನ ಮಂದಾರ ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್ ಬೆಂಗಳೂರು ಇದರಿಂದ `ಸಮಾಜ ರತ್ನ ರಾಷ್ಟ್ರೀಯ ಪುರಸ್ಕಾರ’ಗಳು ಗಳು ಲಭಿಸಿದೆ.

ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷನಾಗಿ ಸಂಘವನ್ನು ಅಭಿವೃದ್ಧಿ ಪಥದತ್ತ ಕೊಂಡೋಯ್ದು ಸಹಕಾರಿ ಸಂಘಕ್ಕೆ ಸುಸಜ್ಜಿತವಾದ ವಿಸ್ತೃತ ಕಚೇರಿ ಕಟ್ಟಡವನ್ನು ನಿರ್ಮಾಣ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ನ.೧೪ರಂದು ಬೆಂಗಳೂರು ವಿಧಾನ ಸೌಧದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ