Sunday, January 19, 2025
ಹೆಚ್ಚಿನ ಸುದ್ದಿ

ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ಗ್ರಾಮೀಣ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ – ಕಹಳೆ ನ್ಯೂಸ್

ಬೆಂಗಳೂರು : ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ಗ್ರಾಮೀಣ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಗ್ರಾಮೀಣ ಮಕ್ಕಳಿಗೆ ಆನ್ ಲೈನ್ ಮತ್ತು ಆಫ್ ಲೈನ್ ಶಿಕ್ಷಣ ಪಡೆಯಲು ಪೂರಕವಾಗಿ ಟ್ಯಾಬ್ ಮತ್ತು ಲ್ಯಾಪ್ ಟ್ಯಾಪ್ ವಿತರಿಸುವ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಜ್ಞಾನತಾಣ ಅಂತರ್ಜಾಲ ಶಿಕ್ಷಣ ಕಾರ್ಯಕ್ರಮಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜ್ಞಾನತಾಣ ಯೋಜನೆಯಡಿಯಲ್ಲಿ ರಾಜ್ಯಾದ್ಯಂತ 21 ಕೋಟಿ ರೂ. ವೆಚ್ಚದಲ್ಲಿ ಮೊದಲ ವರ್ಷ 20 ಸಾವಿರ ಟ್ಯಾಬ್ ಮತ್ತು 10 ಸಾವಿರ ಲಾಪ್ ಟಾಪ್ ಗಳನ್ನು ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ಗ್ರಾಮೀಣ ಮಕ್ಕಳಿಗೆ ವಿತರಿಸಲಾಗುತ್ತದೆ. ಐದರಿಂದ 10 ನೇ ತರಗತಿಯ ಮಕ್ಕಳ ಇಂಗ್ಲಿಷ್, ಗಣಿತ, ವಿಜ್ಞಾನ ಇತ್ಯಾದಿ ಪಠ್ಯಗಳ ಅಧ್ಯಯನವನ್ನು ನಡೆಸಬಹುದು. 450 ಗೌರವ ಶಿಕ್ಷಕರನ್ನು ಈ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ನಿಯೋಜಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು