Recent Posts

Monday, January 20, 2025
ಹೆಚ್ಚಿನ ಸುದ್ದಿ

ಬೀದಿಬದಿ ವ್ಯಾಪಾರಿಗಳಿಗೆ ಬಡ್ಡಿ ರಹಿತ ಸಾಲ : ಅರ್ಜಿ ಸಲ್ಲಿಕೆಗೆ ಇಂದೇ ಕಡೆಯ ದಿನ – ಕಹಳೆ ನ್ಯೂಸ್

ಬೆಂಗಳೂರು : ಆತ್ಮನಿರ್ಭರ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳು ಬಡ್ಡಿರಹಿತ ಸಾಲ ಪಡೆಯಲು ನವೆಂಬರ್ 12 (ಇಂದು) ಕೊನೆಯ ದಿನವಾಗಿದೆ ಎಂದು ನಗರಸಭೆ ಪೌರಾಯುಕ್ತ ಎಲ್. ಮಂಜುನಾಥಸ್ವಾಮಿ ಮಾಹಿತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆತ್ಮನಿರ್ಭರ ಯೋಜನೆಯಡಿ ಬೀದಿಬದಿ ವ್ಯಾಪಾರಿಗಳಿಗೆ ತಲಾ 10 ಸಾವಿರ ರೂ. ಬಡ್ಡಿ ರಹಿತ ಸಾಲವನ್ನು ರಾಷ್ಟ್ರೀಕೃತ ಬ್ಯಾಂಕ್ ಗಳ ಮೂಲಕ ನೀಡಲಾಗುತ್ತಿದೆ. ಈ ಹಿಂದಿನ ಪುರಸಭೆ ಅವಧಿಯಲ್ಲಿ ಸುಮಾರು 408 ಮಂದಿ ಬೀದಿಬದಿಯ ವ್ಯಾಪಾರಿಗಳನ್ನು ಗುರುತಿಸಿ ಗುರುತಿನ ಚೀಟಿ ನೀಡಲಾಗಿದೆ ಎಂದು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ನಗರಸಭೆ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳು ಇತ್ತೀಚಿನ 2 ಭಾವಚಿತ್ರ, ಆಧಾರ್ ಕಾರ್ಡ್ ಅಥವಾ ಮತದಾನದ ಗುರುತಿನ ಚೀಟಿ, ಬ್ಯಾಂಕ್ ಪಾಸ್ ಪುಸ್ತಕ ಹಾಗೂ ಮೊಬೈಲ್ ಅನ್ನು ಕೊಂಡೊಯ್ಯಬೇಕು.ನಗರಸಭೆ ವ್ಯಾಪ್ತಿಯ ಎಲ್ಲ ರೀತಿಯ ಬೀದಿ ಬದಿ ವ್ಯಾಪಾರಿಗಳು ನವೆಂಬರ್ 12 ರೊಳಗೆ ಅರ್ಜಿಯನ್ನು ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದ್ದಾರೆ.