Recent Posts

Monday, January 20, 2025
ಹೆಚ್ಚಿನ ಸುದ್ದಿ

ಕುಟುಂಬ ರಾಜಕಾರಣದಿಂದ ಪ್ರಜಾಪ್ರಭುತ್ವಕ್ಕೆ ಹಾನಿ : ಮೋದಿ -ಕಹಳೆ ನ್ಯೂಸ್

ನವದೆಹಲಿ: ಕುಟುಂಬ ರಾಜಕಾರಣ ಪ್ರಜಾಪ್ರಭುತ್ವಕ್ಕೆ ದೊಡ್ಡ ಬೆದರಿಕೆಯಾಗಿವೆ. ರಾಷ್ಟ್ರೀಯ ಪಕ್ಷವೊಂದು ಕೂಡಾ ಇದಕ್ಕೆ ಬಲಿಯಾಗಿದೆ ಎಂದು ಪ್ರಧಾನಿ ಮೋದಿ ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮತ್ತು ವಿವಿಧ ರಾಜ್ಯಗಳ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ತಮ್ಮ ಪಕ್ಷದ ವಿಜಯದ ಏಕೈಕ ಮಂತ್ರವೆಂದರೆ ‘ಸಬ್ಕಾ ಸಾಥ್, ಸಬ್ಕಾ ವಿಕಾಸ್ ಮತ್ತು ಸಬ್ಕಾ ವಿಶ್ವಾಸ್’ ಎಂದು ಹೇಳಿದರು. ಬಿಹಾರ ಮತ್ತು ಇತರ ಉಪಚುನಾವಣೆಗಳಲ್ಲಿನ ಫಲಿತಾಂಶಗಳು ಅವಲೋಕಿಸುವುದಾದರೆ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವವರಿಗೆ ಮಾತ್ರ ಜನರು ಈಗ ಬೆಂಬಲ ನೀಡುತ್ತಾರೆ ಎಂಬುದು ಗೊತ್ತಾಗಿದೆ. 21ನೇ ಶತಮಾನದಲ್ಲಿ ಅಭಿವೃದ್ಧಿ ಮಾತ್ರವೇ ರಾಷ್ಟ್ರ ರಾಜಕಾರಣಕ್ಕೆ ಆಧಾರವಾಗಿರಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು