58ನೇ ವರ್ಷದ ಶ್ರೀರಾಮನಾಮ ಸಪ್ತಾಹಕ್ಕೆ ಚಾಲನೆ ; ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆಯಲಿದೆ ಶ್ರೀರಾಮ ಕ್ಷೇತ್ರದ ಪ್ರತಿಷ್ಠಾ ವರ್ಧಂತಿ, ಜಾತ್ರಾ ಮಹೋತ್ಸವ ಮತ್ತು ಬ್ರಹ್ಮ ರಥೋತ್ಸವ

ಬೆಳ್ತಂಗಡಿ: ಶ್ರೀ ಗುರುದೇವ ಮಠ ದೇವರಗುಡ್ಡೆ, ಕನ್ಯಾಡಿ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರದಲ್ಲಿ ಹಮ್ಮಿಕೊಂಡಿರುವ 58ನೇ ವರ್ಷದ ಶ್ರೀರಾಮನಾಮ ಸಪ್ತಾಹಕ್ಕೆ ರವಿವಾರ ಶಾಸಕ ಕೆ. ವಸಂತ ಬಂಗೇರ ಚಾಲನೆ ನೀಡಿದರು. ಜಗದ್ಗುರು ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಸ್ಮರಣೆಯೊಂದಿಗೆ ಶ್ರೀರಾಮ ಕ್ಷೇತ್ರದ ಮಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ನೇತೃತ್ವದಲ್ಲಿ ಶ್ರೀರಾಮ ಕ್ಷೇತ್ರದ ಪ್ರತಿಷ್ಠಾ ವರ್ಧಂತಿ, ಜಾತ್ರಾ ಮಹೋತ್ಸವ ಮತ್ತು ಬ್ರಹ್ಮ ರಥೋತ್ಸವ ಮಾ. 25ರ ವರೆಗೆ ನಡೆಯಲಿದೆ.
ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಶಾಸಕರಾದ ಕೆ. ಪ್ರಭಾಕರ ಬಂಗೇರ, ರುಕ್ಮಯ ಪೂಜಾರಿ, ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ, ನಿವೃತ್ತ ಎಸ್‌ಪಿ ಪೀತಾಂಬರ ಹೇರಾಜೆ, ಮಾಜಿ ಅಧ್ಯಕ್ಷ ಭಗೀರಥ ಜಿ., ಮಹಿಳಾ ಬಿಲ್ಲವ ವೇದಿಕೆ ಸ್ಥಾಪಕಾಧ್ಯಕ್ಷೆ ಸುಜಿತಾ ವಿ. ಬಂಗೇರ, ಬಿಜೆಪಿ ತಾಲೂಕು ಅಧ್ಯಕ್ಷ ರಂಜನ್ ಜಿ. ಗೌಡ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಪ್ರತಾಪ್‌ಸಿಂಹ ನಾಯಕ್, ಧರ್ಮಸ್ಥಳ ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಾಡಿತ್ತಾಯ, ಯುವ ಬಿಲ್ಲವ ವೇದಿಕೆ ಮಾಜಿ ಅಧ್ಯಕ್ಷರಾದ ವಸಂತ ಪೂಜಾರಿ ಪುದುವೆಟ್ಟು, ಚಿದಾನಂದ ಇಡ್ಯ, ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಸುವರ್ಣ, ಟ್ರಸ್ಟಿ ಮೋಹನ್ ಉಜೊjàಡಿ, ಕೃಷ್ಣಪ್ಪ ಪೂಜಾರಿ ಕಲ್ಲಡ್ಕ, ಕೃಷ್ಣಪ್ಪ ಗುಡಿಗಾರ್, ತುಕಾರಾಮ್, ಗುರುದೇವ ಕಾಲೇಜು ಪ್ರಾಂಶುಪಾಲ ಕೃಷ್ಣಪ್ಪ ಪೂಜಾರಿ, ಉಜಿರೆ ರಬ್ಬರ್ ಬೆಳೆಗಾರರ ಸಂಘದ ನಿರ್ದೇಶಕ ಗ್ರೇಶಿಯನ್ ವೇಗಸ್, ಬೆಳ್ತಂಗಡಿ ಗುರುನಾರಾಯಣ ಸೇವಾ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ಶೈಲೇಶ್ ಕುಮಾರ್ ಕುರ್ತೋಡಿ, ಸಾರಿಗೆ ಅಧಿಕಾರಿ ಚರಣ್, ಮಹಿಳಾ ಬಿಲ್ಲವ ವೇದಿಕೆ ಮಾಜಿ ಪ್ರಧಾನ ಕಾರ್ಯದರ್ಶಿ ಸುಜಾತಾ ಅಣ್ಣಿ ಪೂಜಾರಿ, ಶೇಖರ್ ಬಂಗೇರ, ರವಿ ಪೂಜಾರಿ ಬರಮೇಲು, ಜಯರಾಮ್ ಬಂಗೇರ ಉಪಸ್ಥಿತರಿದ್ದರು. ಬೆಂಗಳೂರಿನ ಆಗಮ ಪ್ರವೀಣ ಲಕ್ಷ್ಮೀಪತಿ ಗೋಪಾಲಾಚಾರ್ಯ ಅವರಿಂದ ವೈದಿಕ ಕಾರ್ಯಕ್ರಮ ನಡೆಯಿತು.