Recent Posts

Monday, January 20, 2025
ಉಡುಪಿ

ಮನ ನೊಂದ ಪದವಿಧರ ಯುವಕನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ-ಕಹಳೆ ನ್ಯೂಸ್

ಉಡುಪಿ: ಶ್ರೀ ಕೃಷ್ಣ ಮಠದ ರಥಬೀದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿ ಕಂಡು ಬಂದಿರುವ ಯುವಕನನ್ನು ಸಮಾಜ ಸೇವಕರಾದ ವಿಶು ಶೆಟ್ಟಿ ಅಂಬಲಪಾಡಿ, ತಾರಾನಾಥ್ ಮೇಸ್ತ ಶಿರೂರು ಅವರು ರಕ್ಷಿಸಿ, ದೊಡ್ಡಣ ಗುಡ್ಠೆ ಡಾ.ಎ.ವಿ.ಬಾಳಿಗ ಆಸ್ಪತ್ರೆಗೆ ದಾಖಲಿಸಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ನಿವಾಸಿಯಾದ ಯುವಕ ಡಿಪ್ಲೋಮಾ ಪದವಿ ಪಡೆದಿದ್ದು, ಉದ್ಯೋಗ ಇಲ್ಲದೆ ಮಾನಸಿಕವಾಗಿ ನೊಂದು ಮನೆ ಬಿಟ್ಟು ಬಂದಿದ್ದೇನೆ ಎಂದು ಆಪ್ತ ಸಮಾಲೋಚನೆ ಪ್ರಕ್ರಿಯೆಯಲ್ಲಿ ಹೇಳಿಕೊಂಡಿದ್ದಾನೆ. ಯುವಕ ಪತ್ತೆಯಾಗಿರುವ ವಿಷಯವನ್ನು ಹೆತ್ತವರಿಗೆ ಮುಟ್ಟಿಸಲಾಗಿದ್ದು, ಮಗನ ಹುಡುಕಾಟ ನಡೆಸುತ್ತಿದ್ದ ಹೆತ್ತವರು ಉಡುಪಿಗೆ ಬರುವುದಾಗಿ ಹೇಳಿಕೊಂಡಿದ್ದಾರೆ. ಇನ್ನೂ ರಕ್ಷಣಾ ಕಾರ್ಯದಲ್ಲಿ ಐಸಿರಿ ಸುರೇಂದ್ರ ಕುಕ್ಯಾನ್ ಅವರು ಸಹಕರಿಸಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು