Recent Posts

Monday, January 20, 2025
ಹೆಚ್ಚಿನ ಸುದ್ದಿ

‘ಗ್ರಾಮ ಪಂಚಾಯತಿ ಚುನಾವಣೆಗೆ’ ನ್ಯಾಯಾಲಯದಿಂದ ಗ್ರೀನ್‌ ಸಿಗ್ನಲ್:‌ 3 ವಾರಗಳಲ್ಲಿ ʼವೇಳಾಪಟ್ಟಿʼ ಪ್ರಕಟಿಸುವಂತೆ ಸೂಚನೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಉಚ್ಛ ನ್ಯಾಯಾಲಯ ಗ್ರಾಮ ಪಂಚಾಯತಿ ಚುನಾವಣೆ ನಡೆಸಲು ಅನುಮತಿ ನೀಡಿದ್ದು, ರಾಜ್ಯ ಚುನಾವಣಾ ಆಯೋಗಕ್ಕೆ 3 ವಾರಗಳಲ್ಲಿ ವೇಳಾಪಟ್ಟಿ ಪ್ರಕಟಿಸುವಂತೆ ನಿರ್ದೇಶನ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಎಲೆಕ್ಷನ್ ಘೋಷಣೆ ಬಗ್ಗೆ 3 ವಾರದಲ್ಲಿ ಆಯೋಗ ತೀರ್ಮಾನಿಸಬೇಕು. ಅಧಿಕಾರಿಗಳೊಂದಿಗೆ ಆಯೋಗ ಸಮಾಲೋಚನೆ ನಡೆಸಬಹುದು. ಇನ್ನು ಚುನಾವಣೆಗೆ ಹಣಕಾಸಿನ ಅಗತ್ಯವಿದ್ದರೆ ರಾಜ್ಯಪಾಲರನ್ನ ಸಂಪರ್ಕಿಸಬಹುದು ಎಂದು ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅವಧಿ ಮುಗಿದ ಗ್ರಾಮ ಪಂಚಾಯತ್ʼಗಳಿಗೆ ಚುನಾವಣೆ ನಡೆಸಲು ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ಈ ತೀರ್ಫು ನೀಡಿದ್ದು, ಅಸಾಧಾರಣ ಸಂದರ್ಭದಲ್ಲಷ್ಟೇ ಚುನಾವಣೆ ಮುಂದೂಡಬಹುದು. ಆದ್ರೆ, ಅದನ್ನ ಆಯೋಗ ತೀರ್ಮಾನಿಸಬೇಕು. ಚುನಾವಣೆ ಮುಂದೂಡಿಕೆ ಸರ್ಕಾರ ನಿರ್ಧರಿಸುವಂತಿಲ್ಲ ಎಂದು ಸಿಜೆ ಎ.ಎಸ್.ಒಕಾ, ನ್ಯಾ.ಅಶೋಕ್ ಎಸ್. ಕಿಣಗಿರವರಿದ್ದ ಪೀಠ ಸ್ಪಷ್ಟಪಡಿಸಿದೆ.