Recent Posts

Monday, January 20, 2025
ಸುದ್ದಿ

ಮುಂದಿನ ಚುನಾವಣೆಗೆ ಬಿಜೆಪಿ ಸಿದ್ಧತೆ..!-ಕಹಳೆ ನ್ಯೂಸ್

ಬೆಂಗಳೂರು: ಶಿರಾ ಹಾಗೂ ರಾಜ ರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ್ತು ವಿಧಾನಪರಿಷತ್ ನಾಲ್ಕು ಸ್ಥಾನಗಳಲ್ಲಿ ಗೆದ್ದು ಆತ್ಮ ವಿಶ್ವಾಸದಿಂದ ಬೀಗುತ್ತಿರುವ ಆಡಳಿತಾರೂಢ ಬಿಜೆಪಿ ಇದೀಗ ಮುಂಬರುವ ಉಪಚುನಾವಣೆಯ ಮೇಲೆ ಕಣ್ಣಿಟ್ಟಿದೆ. ರಾಯಚೂರು ಜಿಲ್ಲೆ ಮಸ್ಕಿ, ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರಗಳ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಯಾವುದೇ ಕ್ಷಣದಲ್ಲಿ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಮೂರು ಕ್ಷೇತ್ರಗಳನ್ನೂ ಗೆಲ್ಲಲೇಬೇಕೆಂದು ಪಣತೊಟ್ಟಿರುವ ಬಿಜೆಪಿ ಈಗಾಗಲೇ ಕ್ಷೇತ್ರಗಳಲ್ಲಿ ಸದ್ದಿಲ್ಲದೆ ಕಾರ್ಯತಂತ್ರ ಹೆಣೆಯುವತ್ತ ಗಮನ ಹರಿಸಿದೆ. ಮೂರು ಕಡೆ ಬೂತ್ ಮಟ್ಟದ ಕಾರ್ಯಕರ್ತರ ಸಭೆ, ಜಾತಿ ಮುಖಂಡರ ಸಮಾವೇಶ, ಅನ್ಯ ಪಕ್ಷಗಳ ಸೆಳೆಯುವುದು ಸೇರಿದಂತೆ ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸಲು ರಣತಂತ್ರ ಹೆಣೆದಿದೆ.
ಕೆ.ಆರ್.ಪೇಟೆ ಹಾಗೂ ಶಿರಾದಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಹಾಗೂ ಪಕ್ಷದ ಉಪಾಧ್ಯಕ್ಷ ಬಿ.ವೈ ವಿಜೇಯೇಂದ್ರ ಬಸವಕಲ್ಯಾಣ ಹಾಗೂ ಮಸ್ಕಿಯತ್ತ ಗಮನ ಹರಿಸಿದ್ದಾರೆ. ಇಂದಿನಿಂದ ಬಸವಕಲ್ಯಾಣದ ನಾನಾ ಕಡೆ ಪ್ರವಾಸ ನಡೆಸಲಿರುವ ಅವರು, ಕೆಲವು ಕಡೆ ಬೂತ್ ಮಟ್ಟದ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ.ಕಾಂಗ್ರೆಸ್ ಶಾಸಕ ನಾರಾಯಣರಾವ್ ನಿಧನದಿಂದ ತೆರವಾಗಿರುವ ಈ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆಯಾಗಿಲ್ಲ. ಆಗಲೇ ಚುನಾವಣಾ ಕಾವು ರಂಗೇರತೊಡಗಿದೆ. ಬರುವ ಉಪಚುನಾವಣೆಯನ್ನ ಬಿಜೆಪಿಯ ಯುವ ಚಾಣಕ್ಯ ಎಂದು ಬಿಂಬಿತವಾಗುತ್ತಿರುವ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ಸಾರಥ್ಯವನ್ನ ವಹಿಸಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ.

ಬಿಜೆಪಿಯಲ್ಲಿ ಯೂತ್ ಐಕಾನ್ ಆಗಿ ಗುರುತಿಸಿಕೊಳ್ಳುತ್ತಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ, ವಿಜಜೇಂದ್ರ ಮಸ್ಕಿ ವಿಧಾನಸಭಾ ಕ್ಷೇತ್ರದ ಸಾರಥ್ಯವನ್ನ ವಹಿಸಿಕೊಳ್ಳಬೇಕು ಎನ್ನುವ ಒತ್ತಾಯವನ್ನ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಹಾಗೂ ಅವರ ಬೆಂಬಲಿಗರು ಮಾಡಿದ್ದಾರೆ ಎನ್ನಲಾಗ್ತಿದೆ. ಉಪಚುನಾವಣೆ ಕದನದಲ್ಲಿ ಎರಡು ಕ್ಷೇತ್ರಗಳನ್ನು ತನ್ನ ವಶಕ್ಕೆ ಪಡೆದಿಕೊಂಡಿರುವ ಜೋಶ್‍ನಲ್ಲಿರುವ ಬಿಜೆಪಿ, ಮಸ್ಕಿ ಕ್ಷೇತ್ರವನ್ನ ತಮ್ಮದಾಗಿಸಿಕೊಳ್ಳಬೇಕು ಎನ್ನುವ ತವಕದಲ್ಲಿದೆ.

ಇದಕ್ಕೆ ಪ್ರತಿತಂತ್ರವಾಗಿ ಕಾಂಗ್ರೆಸ್ ಸಹ ರಣತಂತ್ರವನ್ನ ರೂಪಿಸಿರುವುದು ಬಿಜೆಪಿಗೆ ಸವಾಲಾಗಿದೆ. ಮಸ್ಕಿ ಉಪಚುನಾವಣೆಯನ್ನ ವಿಜಯೇಂದ್ರ ಅವರ ಸಾರಥ್ಯದಲ್ಲಿ ನಡೆಸಬೇಕು ಎಂದು ಯಡಿಯೂರಪ್ಪಗೆ ಮನವಿ ಮಾಡುವ ಮೂಲಕ ಒತ್ತಡ ಹೇರಲಾಗಿದೆ ಎನ್ನಲಾಗ್ತಿದ್ದು, ಕಲ್ಯಾಣ ಕರ್ನಾಟಕದ ಭಾಗಕ್ಕೆ ವಿಜಯೇಂದ್ರ ಬರುತ್ತಾರಾ ಎನ್ನುವುದು ಚರ್ಚೆಯಾಗುತ್ತಿದೆ.

ಈಗಾಗಲೇ ಪ್ರತಾಪ್ ಗೌಡ ಪಾಟೀಲ್ ಮತ್ತು ಅವರ ಬೆಂಬಲಿಗರು ಬೆಂಗಳೂರಿನಲ್ಲಿ ವಿಜಯೇಂದ್ರರನ್ನ ಭೇಟಿ ಮಾಡಿ ಕ್ಷೇತ್ರದ ರಾಜಕೀಯ ಚಿತ್ರಣ, ಬೆಳವಣಿಗೆಯನ್ನ ತಿಳಿಸುವ ಮೂಲಕ ಚರ್ಚೆ ನಡೆಸಿದ್ದಾರೆ. ಹೀಗಾಗಿ ಪ್ರತಾಪಗೌಡ ಪಾಟೀಲ್ ಒತ್ತಾಯದಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ತಮ್ಮ ಪುತ್ರ ವಿಜಯೇಂದ್ರರನ್ನು ಮಸ್ಕಿ ಬೈ ಎಲೆಕ್ಷನ್ ಕದನದ ಜವಾಬ್ದಾರಿ ವಹಿಸಿ, ಸಾರಥ್ಯ ನೀಡುತ್ತಾರಯೇ ಎಂಬುದನ್ನು ಕಾದು ನೋಡಬೇಕಾಗಿದೆ.