Saturday, September 21, 2024
ರಾಜ್ಯ

ಯಾವುದೇ ಕ್ಷಣದಲ್ಲಿ ಗ್ರಾ.ಪಂ ಚುನಾವಣೆ ಘೋಷಣೆ ಸಾಧ್ಯತೆ, ಗ್ರಾಮಗಳಲ್ಲಿ ಗರಿಗೆದರಿದ ರಾಜಕೀಯ..! – ಕಹಳೆ ನ್ಯೂಸ್

ಬೆಂಗಳೂರು – ಗ್ರಾಮ ಪಂಚಾಯತ್ ಚುನಾವಣೆಗೆ ದಿನಗಣನೆ ನಡೆಯುತ್ತಿದೆ. ಯಾವಾಗ ಬೇಕಾದರೂ ಚುನಾವಣೆ ದಿನಾಂಕ ಘೋಷಣೆಯಾಗಬಹುದಾಗಿದ್ದು, ಸಂಭಾವ್ಯ ಅಭ್ಯರ್ಥಿಗಳ ಚಟುವಟಿಕೆಗಳು ಗ್ರಾಮಗಳಲ್ಲಿ ಬಿರುಸು ಪಡೆದುಕೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಂಭಾವ್ಯ ಅಭ್ಯರ್ಥಿಗಳಂತೂ ಅಭಿವೃದ್ಧಿ ಕಾರ್ಯಗಳ ಕುರಿತು ಪ್ರಚಾರ, ಗ್ರಾಮ ಮಟ್ಟದಲ್ಲಿ ಆಗಬೇಕಾದ ಕೆಲಸಗಳ ಬಗ್ಗೆಯೇ ಪ್ರಮುಖವಾಗಿ ಪ್ರಸ್ತಾಪಿಸಿ, ಜನ ರನ್ನು ಸೆಳೆಯುವತ್ತ ಈಗಾಗಲೇ ತಾಲೀಮು ನಡೆಸತೊಡಗಿದ್ದಾರೆ. ರಾಜಕೀಯ ಪಕ್ಷಗಳೂ ಅಭ್ಯರ್ಥಿಗಳನ್ನು ಬೆಂಬಲಿಸುವ ಬಗ್ಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಚುನಾವಣೆ ರಣಕಣವನ್ನು ಮತ್ತಷ್ಟು ರಂಗೇರಿಸುವಂತೆ ಮಾಡಿದೆ. ತಾಲೂಕುವಾರು ಚುನಾವಣೆ ನಡೆಸಬೇಕೆಂದು ಬಯಸಿದ್ದು ಇದಕ್ಕಾಗಿ ಆಡಳಿತ ಯಂತ್ರಕ್ಕೆ ಸೂಚನೆ ನೀಡಲಾಗಿದೆ. ಒಂದು ದಿನ ಜಿಲ್ಲೆಯ ಒಂದು ಅಥವಾ ಎರಡು ತಾಲೂಕುಗಳಲ್ಲಿ ಮಾತ್ರ ಚುನಾವಣೆ ನಡೆಸುವ ಕುರಿತು ಚಿಂತನೆ ನಡೆಯುತ್ತಿದೆ ಎನ್ನಲಾಗಿದೆ. ಇದಕ್ಕಾಗಿ ಬಿಹಾರ ವಿಧಾನಸಭೆ ಚುನಾವಣೆಯ ಒಳಿತು ಕೆಡುಕುಗಳ ವಿಶ್ಲೇಷಣೆ ಕೂಡ ನಡೆಯುತ್ತಿದೆ. ಶೀಘ್ರಗತಿಯಲ್ಲಿ ಚುನಾವಣಾ ದಿನಾಂಕವನ್ನು ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ ನೀಡಿರುವುದು ರಾಜಕೀಯ ಪಕ್ಷಗಳ ಕಾರ್ಯಗಳು ಮತ್ತಷ್ಟು ಚುರುಕುಗೊಳ್ಳುವಂತೆ ಮಾಡಿದೆ. ಬೆಂಬಲಿತ ಅಭ್ಯರ್ಥಿಗಳ ಆಯ್ಕೆಯ ಬಗ್ಗೆ ಈಗಾಗಲೇ ಬಿಜೆಪಿ ಶೇ.90ರಷ್ಟು ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ.

ಜಾಹೀರಾತು

ಚುನಾವಣೆ ದಿನಾಂಕ ಘೋಷಣೆಯಾದ ಬಳಿಕವಷ್ಟೇ ತೀರ್ಮಾನ ಮಾಡಲು ಚಿಂತಿಸಿದೆ ಎಂದು ಮೂಲಗಳು ಹೇಳಿವೆ. ಬಿಜೆಪಿ ಈಗಾಗಲೇ ಕಾರ್ಯಕಾರಿ ಸಮಿತಿ ಸಭೆ ನಡೆಸಿದ್ದು, ಗ್ರಾಮ ಪಂಚಾಯಿತಿ ಚುನಾವಣೆ ಕುರಿತು ಚರ್ಚೆಗಳನ್ನು ನಡೆಸಿವೆ. ಇದಲ್ಲದೆ ಕುಟುಂಬ ಮಿಲನ ಎಂಬ ಕಾರ್ಯಕ್ರಮವನ್ನೂ ಕೂಡ ಪಂಚಾಯಿತಿ ಮಟ್ಟದಲ್ಲಿ ಆಯೋಜನೆ ಮಾಡಿದೆ. ಈ ಕಾರ್ಯಕ್ರಮದಲ್ಲಿ ಪ್ರತೀ ಪಂಚಾಯಿತಿ ನಾಯಕರು ಪಾಲ್ಗೊಳ್ಳಲಿದ್ದಾರೆಂದು ತಿಳಿದುಬಂದಿದೆ. ಕಾರ್ಯಕ್ರಮದ ವೇಳೆ ಸರ್ಕಾರದ ಸಾಧನೆಗಳು ಹಾಗೂ ಯೋಜನೆಗಳ ಬಗ್ಗೆ ಮಾಹಿತಿ ನೀಡಲಿದ್ದು, ಈ ಮೂಲಕ ಮತದಾರರನ್ನು ತಲುಪಲಾಗುವುದು ಎಂದು ಬಿಜೆಪಿ ಮೂಲಗಳು ಮಾಹಿತಿ ನೀಡಿವೆ. ಈಗಲೇ ಚುನಾವಣೆಗೆ ಸಿದ್ಧತೆ ನಡೆಸಿದೆ. ಬೂತ್ ಮಟ್ಟದ ಹಾಗೂ ಜಿಲ್ಲಾ ಮಟ್ಟದ ಕಾರ್ಯಕರ್ತರೆಲ್ಲರಿಗೂ ಚುನಾವಣೆಗೆ ಸಿದ್ಧತೆ ನಡೆಸುವಂತೆ ಸೂಚಿಸಲಾಗಿದೆ. ಕೊರೊನಾ ನಿರ್ವಹಣೆ, ಪ್ರವಾಹ ಪರಿಸ್ಥಿತಿ ನಿರ್ವಹಣೆ ಹಾಗೂ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸರ್ಕಾರದ ಸಫಲತೆ ಬಗ್ಗೆ ಜನರಿಗೆ ವಿವರಿಸಲಾಗುತ್ತದೆ. ಚುನಾವಣೆಗೆ ನಾವು ಸಿದ್ಧರಿದ್ದೇವೆಂದು ಬಿಜೆಪಿಯ ಪ್ರಮುಖರೊಬ್ಬರು ಹೇಳಿದ್ದಾರೆ. ಉಪಚುನಾವಣೆ ಹಾಗೂ ಪರಿಷತ್ ಚುನಾವಣೆಯಲ್ಲಿ ಪಕ್ಷದ ಗೆಲುವು ಮತ್ತಷ್ಟು ಹುರುಪು ತಂದಿದ್ದು,ಮತದಾರರ ಮನವೊಲಿಸಲು ಮುಂದಾಗಿದೆ.