Recent Posts

Sunday, January 19, 2025
ರಾಜ್ಯ

ಪದವಿ, ಸ್ನಾತಕೋತ್ತರ ಪದವಿ ತರಗತಿಗಳು ನ.17ರಿಂದ ಕಾಲೇಜು ಆರಂಭ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿಗಳು ನ.17ರಿಂದ ಆರಂಭಗೊಳ್ಳಲಿವೆ ಎಂದು ದ.ಕ ಜಿಲ್ಲಾ ಅಪರ ಜಿಲ್ಲಾಧಿಕಾರಿ ಎಂ. ಜೆ ರೂಪ ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ದ.ಕ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್‌-19 ಹಿನ್ನಲೆಯಲ್ಲಿ ವಿಶ್ವವಿದ್ಯಾಲಯ, ಖಾಸಗಿ ವಿಶ್ವವಿದ್ಯಾಲಯ, ಸರ್ಕಾರಿ, ತಾಂತ್ರಿಕ, ಡಿಪ್ಲೋಮ, ಅನುದಾನ, ಅನುದಾನ ರಹಿತ ಕಾಲೇಜುಗಳ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಪ್ರಾಮಾಣಿತ ವಿಧಾನ-ಮಾರ್ಗಸೂಚಿಯ ಕುರಿತ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರತೀ ದಿನ ಕಾಲೇಜು ಪ್ರವೇಶಕ್ಕೆ ವಿದ್ಯಾರ್ಥಿಗಳು ಹಾಜರಾಗಲು ವಿದ್ಯಾರ್ಥಿಗಳ ಗುಂಪನ್ನು ವಿಂಗಡಣೆ ಮಾಡಿ ದಿನ ನಿತ್ಯ ಶೇ.50 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಮಾಡಿಕೊಡಬೇಕು ಹಾಗೂ ಉಳಿದ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿಗಳನ್ನು ನಡೆಸುವಂತೆ ಸೂಚಿಸಿದರು.
ತರಗತಿಗೆ ಹಾಜರಾಗುವ ಬೋಧಕರು, ವಿದ್ಯಾರ್ಥಿಗಳು ಹಾಗೂ ಇತರೆ ಸಿಬ್ಬಂದಿಗಳು ಕಡ್ಡಾಯವಾಗಿ 3 ದಿನಗಳ ಮುಂಚಿತವಾಗಿ ಕೋವಿಡ್‌-19 ಪರೀಕ್ಷೆಯನ್ನು ಮಾಡಿಸಿ, ಪರೀಕ್ಷಾ ವರದಿ ನೆಗೆಟಿವ್‌ ಇದ್ದಲ್ಲಿ ಮಾತ್ರ ತರಗತಿಗೆ ಹಾಜರಾಗಬೇಕು. ಯಾವುದೇ ಆರೋಗ್ಯ ಸಮಸ್ಯೆಗಳು ಕಂಡು ಬಂದಲ್ಲಿ 1077ನ್ನು ಸಂಪರ್ಕಿಸಬಹುದು ಎಂದರು.

ತರಗತಿಗಳಿಗೆ ವಿದ್ಯಾರ್ಥಿಗಳು ಕಡ್ಡಾಯವಾಗಿ ಹಾಜರಾಗಬೇಕಾಗಿಲ್ಲ. ಹಾಜರಾಗಲು ಇಚ್ಛಿಸದ ವಿದ್ಯಾರ್ಥಿಗಳು ಆನ್‌ಲೈನ್‌ ತರಗತಿಗಳಲ್ಲಿ ಪಾಲ್ಗೊಳ್ಳಬಹುದಾಗಿದೆ. ಮಾಸ್ಕ್ , ಸಾಮಾಜಿಕ ಅಂತರ, ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ.

ಕಟ್ಟಡ, ಮುಖ್ಯದ್ವಾರ, ಶೌಚಾಲಯ ಹಾಗೂ ಎಲ್ಲ ಕೊಠಡಿ, ಪಿಠೋಪಕರಣ ಮತ್ತು ಪಠ್ಯ ಸಾಮಗ್ರಿಗಳನ್ನು ದಿನನಿತ್ಯ ಸ್ಯಾನಿಟೈಸ್‌ ಮಾಡಿಸಬೇಕೆಂದರು.ಪೆನ್, ಬುಕ್, ಲ್ಯಾಪ್ ಟಾಪ್ ಹಂಚಿಕೊಳ್ಳುವಂತಿಲ್ಲ ಎಂದು ಅವರು ತಿಳಿಸಿದರು.