Tuesday, January 21, 2025
ಹೆಚ್ಚಿನ ಸುದ್ದಿ

ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ಪ್ರಖಂಡ ವತಿಯಿಂದ ತೊಡಿಕಾನ ಶ್ರೀ ದೇವರಗುಂಡಿ ಪುಣ್ಯ ಕ್ಷೇತ್ರ ಉಳಿಸುವ ದೃಷ್ಟಿಯಿಂದ ಮನವಿ-ಕಹಳೆ ನ್ಯೂಸ್

ಸುಳ್ಯ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ಪ್ರಖಂಡ ವತಿಯಿಂದ ತೊಡಿಕಾನ ಶ್ರೀ ದೇವರಗುಂಡಿ ಪುಣ್ಯ ಕ್ಷೇತ್ರ ಉಳಿಸುವ ದೃಷ್ಟಿಯಿಂದ ವಿರಾಜ ಪೇಟೆ ಶಾಸಕರಾದ ಕೆ.ಜಿ.ಬೋಪಯ್ಯ ರಿಗೆ ಮನವಿ ಸಲ್ಲಿಸಲಾಯಿತು. ಈ ಹಿಂದೆ ದೇವರ ಗುಂಡಿ ಪ್ರದೇಶದಲ್ಲಿ ಅಶ್ಲೀಲ ಚಿತ್ರೀಕರಣ ವಿಚಾರಕ್ಕೆ ಸಂಬಂಧಪಟ್ಟು, ತೋಡಿಕ್ಕಾನ ದೇವಸ್ಥಾನ ಪರಿಸರದಲ್ಲಿ ಇನ್ನೂ ಮುಂದೆ ಈ ರೀತಿಯ ಪ್ರಕರಣಗಳು ನಡೆಯಬಾರದು. ಈ ವಿಚಾರವಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾದ ಸೋಮ ಶೇಖರ ಪೈಕ, ಸುಳ್ಯ ವಿಶ್ವ ಹಿಂದೂ ಪರಿಷತ್ ಪ್ರಧಾನ ಕಾರ್ಯದರ್ಶಿ ರಂಜಿತ್ ಸುಳ್ಯ, ಬಜರಂಗದಳ ಜಿಲ್ಲಾ ಸಹ ಸಂಯೋಜಕ್ ಲತೀಶ್ ಗುಂಡ್ಯ, ಪ್ರಖಂಡ ಸುರಕ್ಷಾ ಪ್ರಮುಖ್ ಸನತ್. ವರ್ಷಿತ್, ರಾಜೇಂದ್ರ ಆಚಾರ್ಯ ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು