ನಾಳೆ ಹೊಸಂಗಡಿ ಗ್ರಾಮದ ಪೆರಿಂಜೆ ಸಂತೃಪ್ತಿ ಸಭಾ ಭವನದಲ್ಲಿ 67 ನೇ ಅಖಿಲ ಭಾರತ ಸಹಕಾರ ಸಪ್ತಾಯ 2020-ಕಹಳೆ ನ್ಯೂಸ್
ಪೆರಾಡಿ: ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಗಮ ಪೆರಾಡಿ ಇದರ ಆಶ್ರಯದಲ್ಲಿ ಸಹಕಾರ ಸಂಸ್ಥೆಗಳ ನಡುವೆ ಸಹಕಾರವನ್ನು ಬಲಪಡಿಸುವುದು ಎಂಬ ಧ್ಯೇಯ ವಾಕ್ಯದ 67 ನೇ ಅಖಿಲ ಭಾರತ ಸಹಕಾರ ಸಪ್ತಾಯ 2020 ನಾಳೆ ಹೊಸಂಗಡಿ ಗ್ರಾಮದ ಪೆರಿಂಜೆ ಸಂತೃಪ್ತಿ ಸಭಾ ಭವನದಲ್ಲಿ ನಡೆಯಲಿದೆ.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿಗಮ ಬೆಂಗಳೂರು. ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನಿಗಮ ಮಂಗಳೂರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಗಮ ಮಂಗಳೂರು. ಬೆಳ್ತಂಗಡಿ ತಾಲೂಕು ಸಹಕಾರಿ ಯೂನಿಯನ್ ನಿಗಮ ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಇಲಾಖೆ. ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು. ಬೆಳ್ತಂಗಡಿ ತಾಲೂಕಿನ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳು, ಬೆಳ್ತಂಗಡಿ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನೌಕರರ ಯೂನಿಯನ್ ಇವರ ಸಹಭಾಗಿತ್ವದಲ್ಲಿ 67 ನೇ ಅಖಿಲ ಭಾರತ ಸಹಕಾರ ಸಪ್ತಾಹ 2020 ರ ಉದ್ಘಾಟನಾ ಸಮಾರಂಭ ನಡೆಯಲಿದೆ.
ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ ನಿಗಮ ಬೆಂಗಳೂರಿನ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಗಮ ಮಂಗಳೂರಿನ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಕೆ.ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಪೆರಿಂಜೆ ಶ್ರೀ ಕ್ಷೇತ್ರ ಪಡ್ಯಾರಬೆಟ್ಟು ಅನುವಂಶೀಯ ಆಡಳಿತದಾರರಾದ ಎ.ಜೀವಂಧರ ಕುಮಾರ್, ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಗಮದ ನಿರ್ದೇಶಕರಾದ ಬಿ.ನಿರಂಜನ್, ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ ನಿಗಮದ ನಿರ್ದೇಶಕರಾದ ಪದ್ಮನಾಭ ಅರ್ಕಜೆ, ನಾರಾವಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರಾದ ಪಿ.ಧರಣೇಂದ್ರ ಕುಮಾರ್, ಹೊಸಂಗಡಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯರಾದ ಓಬಯ್ಯ, ನಾರಾವಿ ಕ್ಷೇತ್ರದ ತಾಲೂಕು ಪಂಚಾಯತ್ ಸದಸ್ಯರಾದ ರೂಪಲತಾ, ಪುತ್ತೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿರ್ಬಂಧಕರಾದ ರಾಜು, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಉಪಾಧ್ಯಕ್ಷರಾದ ಇ.ಸುಂದರ ಗೌಡ, ಬೆಳ್ತಂಗಡಿ ಸಹಕಾರ ಅಭಿವೃದ್ಧಿ ಅಧಿಕಾರಿ ಸುಕನ್ಯ ರಾವ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಲಿದ್ದಾರೆ.