Saturday, November 23, 2024
ರಾಜ್ಯಸುದ್ದಿ

ಮಾಜಿ ಮೇಯರ್ ಸಂಪತ್ ರಾಜ್ ಕೊನೆಗೂ ಅರೆಸ್ಟ್..! – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ವೇಳೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ದಾಳಿ ಮಾಡಿ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಾಜಿ ಮೇಯರ್ ಸಂಪತ್ ರಾಜ್ ನನ್ನು ಸಿಸಿಬಿ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೊರೋನಾ ಪಾಸಿಟಿವ್ ಎಂದು ಹೇಳಿ ಆಸ್ಪತ್ರೆ ಸೇರಿದ್ದ ಸಂಪತ್ ರಾಜ್ ಅಕ್ಟೋಬರ್ 23ರಂದು ಆಸ್ಪತ್ರೆಯಿಂದ ಪರಾರಿಯಾಗಿದ್ದರ . ತೀವ್ರ ಹುಡುಕಾಟದ ನಂತರ ಸೋಮವಾರ ರಾತ್ರಿ ಸಿಸಿಬಿ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸೋಮವಾರ ಸಂಜೆ ಸಂಪತ್ ರಾಜ್ ತನ್ನ ಪುಲಕೇಶಿ ನಗರದ ಮನೆಗೆ ಬರುವ ಖಚಿತ ಮಾಹಿತಿ ಪಡೆದ ಪೊಲೀಸರು ಆತನನ್ನು ಸೆರೆ ಹಿಡಿದಿದ್ದಾರೆ. 22 ದಿನಗಳ ಕಾಲ ತಲೆಮರೆಸಿಕೊಂಡು ಓಡಾಡುತ್ತಿದ್ದ ಮಾಜಿ ಮೇಯರ್ ಕೈಗೆ ಕೊನೆಗೂ ಪೊಲೀಸರು ಕೋಳ ಹಾಕಿದ್ದಾರೆ. ಬಂಧನಕ್ಕೆ ಜಾಲ ಬೀಸಿದ್ದ ಸಿಸಿಬಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಎಸ್ಕೇಪ್ ಆಗುತ್ತಿದ್ದ ಸಂಪತ್ ರಾಜ್, ನಾಗರಹೊಳೆ, ಕೇರಳ ಮುಂತಾದೆಡೆಗೆ ಪ್ರಯಾಣಿಸುತ್ತಿದ್ದರು. ಆದರೆ ಸೋಮವಾರವಷ್ಟೇ ಬೆಂಗಳೂರಿಗೆ ಬಂದು ಬೆನ್ಸನ್​ ಟೌನ್​ನಲ್ಲಿನ ಅಪಾರ್ಟ್​ಮೆಂಟೊಂದರಲ್ಲಿ ತಂಗಿದ್ದ ಸಂಪತ್​ ರಾಜ್​ ಕುರಿತು ಖಚಿತ ಮಾಹಿತಿ ಸಿಗುತ್ತಿದ್ದಂತೆ, ಎಸಿಪಿ ವೇಣುಗೋಪಾಲ್​ ನೇತೃತ್ವದಲ್ಲಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಯನ್ನು ಬಂಧಿಸಿ ಅಜ್ಞಾತ ಸ್ಥಳದಲ್ಲಿ ಇರಿಸಿರುವ ಸಿಸಿಬಿ ಪೊಲೀಸರು, ಅವರನ್ನು ಇಂದು ಮಧ್ಯಾಹ್ನ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. ಪ್ರಕರಣ ಸಂಬಂಧ 50 ಪುಟಗಳ ಮಧ್ಯಂತರ ದೋಷಾರೋಪ ಪಟ್ಟಿಯನ್ನು ಸಿಸಿಬಿ ಈಗಾಗಲೇ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ. ಡಿ.ಜೆ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ರನ್ನು ಬಂಧಿಸದ ಪೊಲೀಸರ ಕಾರ್ಯ ವೈಖರಿ ಬಗ್ಗೆ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿತ್ತು. ಒಬ್ಬ ಮಾಜಿ ಮೇಯರ್ ನ್ನು ಬಂಧಿಸಲು ಸಾಧ್ಯವಾಗಲಿಲ್ಲವೇ ಎಂದು ಹೈಕೋರ್ಟ್‌ ಚಾಟಿ ಬೀಸಿದ ಹಿನ್ನೆಲೆಯಲ್ಲಿ ಇದೀಗ ಸಿಸಿಬಿ ಪ್ರತ್ಯೇಕ ತಂಡಗಳನ್ನು ರಚಿಸಿದ್ದು, ಸಂಪತ್ ರಾಜ್‌ಗಾಗಿ ಹುಡುಕಾಟ ನಡೆಸಿತ್ತು.

# ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಪ್ರತಿಕ್ರಿಯೆ :
ಸಂಪತ್ ರಾಜ್ ಬಂಧನದ ಕುರಿತು ಪ್ರತಿಕ್ರಿಯೆ ನೀಡಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ, 3 ಜನ ಕಾರ್ಪೋರೇಟರ್ ಗಳಿಗೂ ಶಿಕ್ಷೆ ಆಗಬೇಕು. ತಪ್ಪಿತಸ್ಥರಿಂದ ನಷ್ಟದ ವಸೂಲಿ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಸಂಪತ್ ರಾಜ್ ತಪ್ಪು ಮಾಡದಿದ್ದರೆ ಏಕೆ ಓಡಿ ಹೋಗಬೇಕಿತ್ತು. ನನ್ನ ಪರ ಮಾಜಿ ಸಿಎಂ ಸಿದ್ದರಾಮಯ್ಯ, ಜಮೀರ್ ಅಹ್ಮದ್ ಖಾನ್ ಇದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈಗಾಲಾದರೂ ನಮ್ಮ ಪರವಾಗಿ ನಿಲ್ಲಲಿ ಎಂದು ಹೇಳಿದ್ದಾರೆ.