Recent Posts

Monday, April 14, 2025
ಹೆಚ್ಚಿನ ಸುದ್ದಿ

ಮೋದಿ ನೇತೃತ್ವದ ಕೇಂದ್ರ ಸರಕಾರದಿಂದ ದ.ಕ. ಜಿಲ್ಲೆಗೆ ಅವಮಾನ: ಮಿಥುನ್ ರೈ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಕಂಪೆನಿಗೆ ಗುತ್ತಿಗೆ ನೀಡಿರುವ ಮೋದಿ ನೇತೃತ್ವದ ಕೇಂದ್ರ ಸರಕಾರವು ಈ ನಿಲ್ದಾಣಕ್ಕೆ ಗೌತಮ್ ಅದಾನಿ ಹೆಸರಿಡುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಗೆ ಅವಮಾನ ಮಾಡಿದೆ ಎಂದು ದ.ಕ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರರಾದ ಕೋಟಿ-ಚೆನ್ನಯರ ಹೆಸರಿಡಬೇಕು ಎಂದು ಒತ್ತಾಯಿಸಿದರು. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಖಾಸಗಿ ಕಂಪೆನಿಗೆ ಗುತ್ತಿಗೆ ನೀಡಿದ್ದರೂ ಅದರ ಹೆಸರು ಬದಲಾವಣೆ ಮಾಡಿಲ್ಲ. ಅದೇರೀತಿ ಗುಜರಾತ್, ಮುಂಬಯಿ ವಿಮಾನ ನಿಲ್ದಾಣಗಳ ಹೆಸರನ್ನು ಬದಲಾಯಿಸಿ ಗುತ್ತಿಗೆ ಕಂಪೆನಿಯ ಹೆಸರನ್ನು ಸೂಚಿಸಿಲ್ಲ. ಆದರೆ ಮಂಗಳೂರು ವಿಮಾನ ನಿಲ್ದಾಣದ ಹೆಸರನ್ನು ಮಾತ್ರ ಏಕೆ ಬದಲಾಯಿಸಲಾಗಿದೆ. ಈ ಬಗ್ಗೆ ಇಲ್ಲಿನ ಸಂಸದರು ತಮ್ಮ ಇಚ್ಛಾ ಶಕ್ತಿಯನ್ನು ಪ್ರದರ್ಶಿಸಬೇಕಾಗಿತ್ತು ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಹೆಸರು ಬದಲಾಯಿಸುವವರೆಗೆ ನಿರಂತರ ಹೋರಾಟ ಅದಾನಿ ಹೆಸರಿನಲ್ಲಿ ಕಾರ್ಯಾಚರಿಸುತ್ತಿರುವ ಮಂಗಳೂರು ವಿಮಾನ ನಿಲ್ದಾಣದ ಹೆಸರನ್ನು ಬದಲಾಯಿಸಲು ಆಗ್ರಹಿಸಿ ಈಗಾಗಲೇ ಕಾಂಗ್ರೆಸ್ ವತಿಯಿಂದ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲಾಗಿದೆ. ನ.18ರಂದು ಸಂಜೆ ನಗರದ ಸರ್ಕ್ಯೂಟ್ ಹೌಸ್‌ನಿಂದ ವಿಮಾನ ನಿಲ್ದಾಣದ ವರೆಗೆ ಪಂಜಿನ ಮೆರವಣಿಗೆಯೊಂದಿಗೆ ಪ್ರತಿಭಟನಾ ಪ್ರದರ್ಶನ ನಡೆಸಲಾಗುವುದು. ಇದಕ್ಕೆ ಯಾವುದೇ ಸಕರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗದಿದ್ದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಹಾಗೂ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಿಥುನ್ ರೈ ಎಚ್ಚರಿಸಿದರು. ವಿಮಾನ ನಿಲ್ದಾಣದಲ್ಲಿ ಅದಾನಿ ಕಂಪೆನಿಯ ಆನೆಯ ಚಿಹ್ನೆ ತೆರವು ಮಾಡಿ ಹಿಂದೆ ಇದ್ದ ಹುಲಿ ಕುಣಿತದ ಚಿಹ್ನೆಯನ್ನು ತಕ್ಷಣ ಅಳವಡಿಸಬೇಕು ಎಂದು ಮಿಥುನ್ ರೈ ಆಗ್ರಹಿಸಿದರು.

ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ, ಶ್ರೀನಿವಾಸ ಮಲ್ಯರ ಪ್ರಯತ್ನದ ಫಲವಾಗಿ ದ.ಕ. ಜಿಲ್ಲೆಗೆ ಲಭಿಸಿರುವ ವಿಮಾನ ನಿಲ್ದಾಣಕ್ಕೆ ಯಾವ ಕೊಡುಗೆಯನ್ನು ನೀಡದ ಅದಾನಿಯ ಹೆಸರನ್ನು ಇಟ್ಟಿರುವುದು ಜಿಲ್ಲೆಯ ಜನರಿಗೆ ಮಾಡುತ್ತಿರುವ ಅಪಮಾನ ಮತ್ತು ನಾಚಿಗೇಡಿನ ಸಂಗತಿಯಾಗಿದೆ. ಆ ಮೂಲಕ ತುಳುನಾಡೆಂದು ಕರೆಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸವನ್ನು ಮರೆಮಾಚಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಸದಾಶಿವ ಉಳ್ಳಾಲ್, ವಸಂತ್ ಬೆರ್ನಾರ್ಡ್, ಪಿಯೂಸ್ ಮೊದಲಾದವರು ಉಪಸ್ಥಿತರಿದ್ದರು.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ