Recent Posts

Monday, January 20, 2025
ರಾಜ್ಯ

ರಾಜ್ಯದ ಮರಾಠ ಜನಾಂಗದವರ ಅಭಿವೃದ್ದಿಗೆ ಪ್ರಾಧಿಕಾರ ರಚನೆ :ಬಿ.ಎಸ್. ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು : ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಾಜ್ಯದಲ್ಲಿರುವ ಮರಾಠ ಜನಾಂಗದವರ ಅಭಿವೃದ್ಧಿಗಾಗಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಾಜ್ಯದಲ್ಲಿರುವ ಮರಾಠ ಜನಾಂಗದವರ ಅಭಿವೃದ್ಧಿಗಾಗಿ ರಚಿಸಲು ಉದ್ದೇಶಿಸಲಾಗಿದೆ. ಮರಾಠಿ ಭಾಷೆಗೂ ಈ ಪ್ರಾಧಿಕಾರಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮರಾಠ ಜನಾಂಗದವರು ತಲಾತಲಾಂತರಗಳಿಂದ ಕರ್ನಾಟಕದಲ್ಲಿಯೇ ವಾಸವಾಗಿದ್ದು, ಆರ್ಥಿಕವಾಗಿ, ಸಾಮಾಜಿಕವಾಗಿ ಅವರ ಸರ್ವತೋಮುಖ ಅಭಿವೃದ್ಧಿಯಾಗಬೇಕು ಎನ್ನುವ ಆಶಯದಿಂದ ಈ ಪ್ರಾಧಿಕಾರವನ್ನು ಸ್ಥಾಪಿಸಲು ಕ್ರಮವಹಿಸಲಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು